ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ: ಗ್ಯಾಸ್ ಸಿಲಿಂಡರ್ ಸಿಡಿದು ಮೂವರು ಸಾವು - Mahanayaka
6:39 PM Wednesday 10 - September 2025

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ: ಗ್ಯಾಸ್ ಸಿಲಿಂಡರ್ ಸಿಡಿದು ಮೂವರು ಸಾವು

bangalore
23/09/2021

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮತ್ತೊಂದು ದುರಂತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಮೃತಪಟ್ಟಿದ್ದು. ಘಟನಾ ಸ್ಥಳದಲ್ಲಿದ್ದ ಹತ್ತಾರು ಬೈಕ್ ಗಳು ಸುಟ್ಟು ಕರಕಲಾಗಿವೆ.


Provided by

ಬೆಂಗಳೂರಿನ ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ನ್ಯೂ ತಗರುಪೇಟೆಯಲ್ಲಿ ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಸ್ಫೋಟಕ್ಕೆ ಹಲವರಿಗೆ ಗಾಯಗಳಾಗಿದ್ದು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಸಿಲಿಂಡರ್ ಸ್ಫೋಟದ ತೀವ್ರತೆಗೆ ಮೂವರ ದೇಹಗಳು ಛಿದ್ರಗೊಂಡು ಒಂದಷ್ಟು ದೂರ ಹಾರಿ ಹೋಗಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಘಟನೆಯಿಂದಾಗಿ ಸ್ಥಳೀಯ ಜನರು ಆತಂಕಕ್ಕೀಡಾಗಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on

ಇನ್ನಷ್ಟು ಸುದ್ದಿಗಳು…

ಮೊಬೈಲ್ ಚಾರ್ಜ್ ಇಡುವ ವೇಳೆ ವಿದ್ಯುತ್ ಶಾಕ್ ತಗಲಿ ಒಂದೇ ಕುಟುಂಬದ ಮೂವರ ದಾರುಣ ಸಾವು

ಪತ್ನಿಯ ಕುತ್ತಿಗೆಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ರಿಯಲ್ ಎಸ್ಟೇಟ್ ಉದ್ಯಮಿ!

ಮದುವೆ ಮಂಟಪದಲ್ಲಿ ಗುಟ್ಕಾ ಜಗಿದ ವರನಿಗೆ ಕಪಾಳಕ್ಕೆ ಬಾರಿಸಿ ಉಗುಳಿಸಿದ ವಧು! | ವಿಡಿಯೋ ವೈರಲ್

ಪೂಜೆ ಮುಗಿಸಿ ಮನೆಗೆ ಹೋಗುತ್ತಿದ್ದ ಅರ್ಚಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ!

ಕೊನೆಗೂ ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸಿದ ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ

“ನನ್ನ ಪಂಚೆ ಕಳಚ್ಕೊಂಡಿದೆ, ಈಶ್ವರಪ್ಪ…” | ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ