ಫ್ಲೈಓವರ್ ಮೇಲೆ ಬೈಕ್ ಗೆ ಡಿಕ್ಕಿ ಹೊಡೆದ ಕಾರು: 40 ಅಡಿ ಎತ್ತರದಿಂದ ಕೆಳಗೆ ಬಿದ್ದ ಬೈಕ್ ಸವಾರರು
ಬೆಂಗಳೂರು: ನಗರದ ಬೊಮ್ಮನಹಳ್ಳಿ ಸಮೀಪದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದು, ಈ ಭೀಕರ ಅಪಘಾತ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ.
ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಕಾರು ಮತ್ತು ಬೈಕ್ ಡಿಕ್ಕಿಯಾಗಿ ಪ್ಲೈಓವರ್ ಗೆ ಗುದ್ದಿದ್ದು ಪರಿಣಾಮವಾಗಿ ಬೈಕ್ ಸವಾರರಿಬ್ಬರು 40 ಅಡಿ ಎತ್ತರ ಪ್ಲೈಓವರ್ ನಿಂದ ಕೆಳಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕಾರು ಚಾಲಕ ವಿಪರೀತವೇಗದಿಂದ ಬಂದು ಬೈಕ್ ನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಕಾರು ಬೈಕ್ ಸಹಿತ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರು ಫ್ಲೈಓವರ್ ನಿಂದ ಕೆಳಗೆ ಬಿದ್ದಿದ್ದಾರೆ. ಪರಿಣಾಮವಾಗಿ ಇಬ್ಬರ ದೇಹ ಕೂಡ ಛಿದ್ರಛಿದ್ರವಾಗಿದೆ.
ಮೃತ ಬೈಕ್ ಸವಾರರು ತಮಿಳುನಾಡು ಮೂಲದವರಾಗಿದ್ದು, 30 ವರ್ಷ ವಯಸ್ಸಿನ ಪ್ರೀತಮ್ ಹಾಗೂ 28 ವರ್ಷ ವಯಸ್ಸಿನ ಕೃತಿಕಾ ಎಂದು ಗುರುತಿಸಲಾಗಿದೆ. ಇವರಿಬ್ಬರು ಸ್ನೇಹಿತರಾಗಿದ್ದರು ಎಂದು ತಿಳಿದು ಬಂದಿದೆ. ಸದ್ಯ ಮೃತದೇಹಗಳನ್ನು ಸೈಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮೃತದ ಕುಟುಂಬಸ್ಥರಿಗೆ ಮಾಹಿತಿ ರವಾನಿಸಲಾಗಿದೆ.
ಇನ್ನಷ್ಟು ಸುದ್ದಿಗಳು…
ಅವಸರದಿಂದ ದೇವಸ್ಥಾನಗಳನ್ನು ಒಡೆಯಬೇಡಿ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ
ಮಸೀದಿ, ಚರ್ಚ್, ದೇವಸ್ಥಾನ ಅಂತ ಇಲ್ಲ, ಯಾವುದೇ ಇದ್ದರೂ ತೆರವು ಮಾಡುತ್ತೇವೆ | ರಾಮನಗರ ಡಿಸಿ
ಪ್ರಧಾನಿ ಮೋದಿ ಖಾತೆಗೆ ಹಣ ಹಾಕಿದ್ದಾರೆ ಎಂದು ಭಾವಿಸಿ ಖರ್ಚು ಮಾಡಿ ಜೈಲು ಸೇರಿದ ಯುವಕ!
ನೀವು ಲಿಂಬೆ ಸೋಡಾವನ್ನು ಅತೀಯಾಗಿ ಕುಡಿಯುತ್ತೀರಾ? | ಹಾಗಿದ್ದರೆ, ಈ ವಿಚಾರ ನೀವು ತಿಳಿಯಲೇ ಬೇಕು
ಆಸ್ತಿಗಾಗಿ ಸಹೋದರರ ಜಗಳ: ಕಟ್ಟಡದ ಮೇಲಿನಿಂದ ಓರ್ವ ಸಹೋದರನನ್ನು ಕೆಳಕ್ಕೆಸೆಯಲು ಯತ್ನ