ಹಿಂದೂ ಅರ್ಚಕ ಚಿನ್ಮಯ್ ಕೃಷ್ಣ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾದೇಶ ಕೋರ್ಟ್
ಬಂಧಿತ ಹಿಂದೂ ಅರ್ಚಕ ಚಿನ್ಮಯ್ ಕೃಷ್ಣ ದಾಸ್ ಅವರ ಜಾಮೀನು ವಿಚಾರಣೆಯ ದಿನಾಂಕವನ್ನು ಬದಲಾಯಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಬಾಂಗ್ಲಾದೇಶದ ನ್ಯಾಯಾಲಯ ತಿರಸ್ಕರಿಸಿದೆ.
ಬಾಂಗ್ಲಾದೇಶ ಸಮ್ಮಿಲಿಟೊ ಸನಾತನ ಜಾಗರೋನ್ ಜೋಟೆ ವಕ್ತಾರ ಚಿನ್ಮಯ್ ಕೃಷ್ಣ ದಾಸ್ ಅವರು ಬುಧವಾರ ಅರ್ಜಿ ಸಲ್ಲಿಸಿದ ವಕೀಲರಿಗೆ ಅಧಿಕಾರವನ್ನು ನೀಡಿಲ್ಲ ಎಂದು ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.
ಬಾಂಗ್ಲಾದೇಶ ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ರವೀಂದ್ರ ಘೋಷ್ ಅವರು ಚಿತ್ತಗಾಂಗ್ ಗೆ ತೆರಳಿ ಚಿನ್ಮಯ್ ಕೃಷ್ಣ ದಾಸ್ ಅವರಿಗಾಗಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು.
“ಚಿನ್ಮಯ್ ಕೃಷ್ಣ ದಾಸ್ ಅವರ ಜಾಮೀನು ವಿಚಾರಣೆಗೆ ಶೀಘ್ರ ದಿನಾಂಕವನ್ನು ನಿಗದಿಪಡಿಸುವಂತೆ ನಾನು ಚಿತ್ತಗಾಂಗ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇನೆ. ಆದರೆ ಆ ಸಮಯದಲ್ಲಿ ಸುಮಾರು 30 ವಕೀಲರು ನ್ಯಾಯಾಲಯದ ಅನುಮತಿಯಿಲ್ಲದೆ ನ್ಯಾಯಾಲಯಕ್ಕೆ ಪ್ರವೇಶಿಸಿ ನನ್ನ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದರು” ಎಂದು ಘೋಷ್ ಎಎನ್ಐಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj