ದೇವಸ್ಥಾನದ ವಠಾರದಲ್ಲಿ ಯಾರು ಬ್ಯಾನರ್ ಹಾಕಿದ್ದಾರೆ ಎಂದು ಗೊತ್ತಿಲ್ಲ | ಬಪ್ಪನಾಡು ದೇವಸ್ಥಾನ ಮುಕ್ತೇಸರರು ಹೇಳಿದ್ದೇನು?
ಮಂಗಳೂರು: ದೇವಸ್ಥಾನದ ವಠಾರದಲ್ಲಿ ಯಾರು ಬ್ಯಾನರ್ ಹಾಕಿದ್ದಾರೆ ಗೊತ್ತಿಲ್ಲ ಎಂದು ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲದ ಮೊಕ್ತೇಸರ ಮನೋಹರ್ ಶೆಟ್ಟಿ ಹೇಳಿಕೆ ನೀಡಿದ್ದು, ದೇವಸ್ಥಾನದ ವಠಾರದಲ್ಲಿ ಬ್ಯಾನರ್ ಹಾಕಲು ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಪ್ಪನಾಡು ಕ್ಷೇತ್ರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ ವಿಚಾರವಾಗಿ ಮಾತನಾಡಿದ ಅವರು, ಪ್ರತಿ ವರ್ಷ ಇಲ್ಲಿ ಮುಸ್ಲಿಮರು ವ್ಯಾಪಾರ ಮಾಡುತ್ತಾರೆ. ಆದರೆ ಈ ಬಾರಿ ಬಂದಿಲ್ಲ. ಅದಕ್ಕೆ ಕಾರಣ ಗೊತ್ತಿಲ್ಲ ಎಂದರು.
ದೇವಸ್ಥಾನದ ಆಡಳಿತ ಮಂಡಳಿ ಯಾವುದೇ ಬಹಿಷ್ಕಾರ ಹಾಕಿಲ್ಲ. ಮುಸ್ಲಿಮ್ ವ್ಯಾಪಾರಿಗಳು ಬಂದರೂ ವಾಪಸ್ ಕಳುಹಿಸುವುದಿಲ್ಲ. ಆದರೆ ಅವರಿಗೆ ತೊಂದರೆಯಾದರೆ, ದೇವಸ್ಥಾನ ಜವಾಬ್ದಾರಿ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
ಕೆಲವರು ದೇವಸ್ಥಾನದಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಮನವಿ ನೀಡಿದ್ದರು. ಆದರೆ, ನಮ್ಮ ನಿರ್ಧಾರ ಅವರಿಗೆ ಸ್ಪಷ್ಟಪಡಿಸಿದ್ದೆವು. ನಾವು ಯಾರಿಗೂ ನಿರ್ಬಂಧ ಹಾಕಿಲ್ಲ. ಯಾರು ಕೂಡ ದೇವಸ್ಥಾನದ ಪಾವಿತ್ರ್ಯಗೆ ಧಕ್ಕೆ ತರಬಾರದು ಎಂದು ಅವರು ಮನವಿ ಮಾಡಿಕೊಂಡರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಇಲಾಖೆಯ ಪೂರ್ವಾನುಮತಿ ಇಲ್ಲದೆ ವಿದೇಶ ಪ್ರಯಾಣ: ಇನ್‌ಸ್ಪೆಕ್ಟರ್ ಅಮಾನತು
ದಲಿತ ಯುವಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಆ್ಯಸಿಡ್ನಿಂದ ಹಣೆ ಮೇಲೆ ತ್ರಿಶೂಲ ಬಿಡಿಸಿ, ಚಿತ್ರಹಿಂಸೆ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಉ.ಪ್ರ. ನಿಯೋಜಿತ ಸಿಎಂ ಯೋಗಿ ಆದಿತ್ಯನಾಥ್ಗೆ ನೋಟಿಸ್ ಜಾರಿ
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಜನರನ್ನು ಸಂಘ ಪರಿವಾರ ಬೇರ್ಪಡಿಸುತ್ತಿದೆ: ಬೃಂದಾ ಕಾರಟ್ ಆರೋಪ