ಸೌದೆ ತರಲು ಗುಡ್ಡಕ್ಕೆ ಹೋದ ಸ್ಥಳೀಯರಿಗೆ ಕಂಡದ್ದು ಭಯಾನಕ ದೃಶ್ಯ: ಹೆದರಿ ಓಡಿದ ಜನ
21/12/2022
ಪುಣಚ: ಗುಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಆಜೇರು ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ನಡೆದಿದೆ.
ಸೊಪ್ಪು, ಸೌದೆ ತರಲು ಗುಡ್ಡಕ್ಕೆ ಹೋದ ಸ್ಥಳೀಯರಿಗೆ ಮೊಬೈಲ್ ಪತ್ತೆಯಾಗಿದೆ. ಇದನ್ನು ಗಮನಿಸಿ ಅಕ್ಕಪಕ್ಕದ ನೋಡಿದ ವೇಳೆ ಮೃತದೇಹ ಪತ್ತೆಯಾಗಿದ್ದು, ಭಯಗೊಂಡು ಜನರು ಓಡಿಹೋಗಿದ್ದಾರೆ.
ಪಕ್ಕದಲ್ಲಿರುವ ಮರದಲ್ಲಿ ಹಗ್ಗವೊಂದು ನೇತಾಡುತ್ತಿದ್ದು, ಮೃತದೇಹ ನೆಲದಲ್ಲಿ ಬಿದ್ದುಕೊಂಡಿದ್ದು, ಕೊಳೆತು ಅಸ್ಥಿಪಂಜರ ಮಾತ್ರ ಕಾಣುತ್ತಿದೆ. ಸತ್ತು ಹಲವು ಸಮಯ ಕಳೆದಿರಬಹುದು ಎಂದು ಶಂಕಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka