ಪ್ರವೀಣ್ ನೆಟ್ಟಾರು ಹತ್ಯೆಯಾದರೂ ಬಾರದ ಬಿಜೆಪಿ ಜನಪ್ರತಿನಿಧಿಗಳು: ಸ್ಥಳೀಯರಿಂದ ಆಕ್ರೋಶ
ಪುತ್ತೂರು: ಮಂಗಳವಾರ ರಾತ್ರಿ ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದರೂ, ಬಿಜೆಪಿಯ ಯಾವುದೇ ಜನಪ್ರತಿನಿಧಿಗಳು ಆಗಮಿಸಿಲ್ಲ ಎಂದು ನೆರೆದಿದ್ದ ಗುಂಪು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ಪುತ್ತೂರಿನ ಆಸ್ಪತ್ರೆ ಎದುರು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಹಿಂದುತ್ವಕ್ಕೋಸ್ಕರ ಜೀವವನ್ನೇ ಬಲಿ ಕೊಟ್ಟ, ಅವರ ಮನೆಯವರಿಗೆ ಯಾರಿದ್ದಾರೆ? ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾತ್ರಿಯೇ ಮಾಹಿತಿ ಸಿಕ್ಕಿದರೂ ಬಿಜೆಪಿಯ ಜನಪ್ರತಿನಿಧಿಗಳು ಅದು ಇದು ನೆಪ ಹೇಳಿ ತಪ್ಪಿಸಿಕೊಂಡಿದ್ದಾರೆ. ನಾವು ಅವರು ಬರುವವರೆಗೆ ಕಾಯುವುದಿಲ್ಲ. ಮೃತದೇಹವನ್ನು ಮುಂದಿಟ್ಟುಕೊಂಡು ಅವರು ಶೋ ಮಾಡುವುದು ಬೇಡ ಎಂದು ಗುಂಪು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka