ಮಳೆಯ ಎಫೆಕ್ಟ್: ಮಲೆ ಮಾದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಸಮೀಪ ತಡೆಗೋಡೆ ಕುಸಿತ

madappa
12/05/2023

ಹನೂರು : ಕಳೆದ ಒಂದು ವಾರದಿಂದ ಬೀಳುತ್ತಿರುವ ಸತತ ಮಳೆಗೆ ಮಲೆ ಮಾದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಸಮೀಪ ತಡೆಗೋಡೆ ಕುಸಿತವಾಗಿದೆ.

ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಪ್ರಾಧಿಕಾರದ ವತಿಯಿಂದ ದೀಪದಗಿರಿ ಓಡ್ದು ಸಮೀಪ ನಿರ್ಮಾಣ ಮಾಡಿರುವ 108 ಅಡಿ ಮಲೆ ಮಾದೇಶ್ವರ ಪ್ರತಿಮಾ ಮುಂಭಾಗ ತಡೆಗೋಡೆ ನಿರ್ಮಾಣ ಮಾಡಲಾಗಿತ್ತು. ಕಳೆದ ಒಂದು ವಾರದಿಂದ ಬೀಳುತ್ತಿರುವ ಸತತ ಮಳೆಗೆ ಕುಸಿತಗೊಂಡಿದೆ. ಈಗಾಗಲೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಭಕ್ತರ ಪ್ರವೇಶ ನಿಷೇಧ ಮಾಡಲಾಗಿದೆ. ಈ ಹಿನ್ನೆಲೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದು ಬಂದಿದೆ.

ಈಗಾಗಲೇ ಪ್ರಾಧಿಕಾರದ ವತಿಯಿಂದ ದುರಸ್ತಿ ಕಾರ್ಯ ಪ್ರಾರಂಭವಾಗಿದ್ದು ಇನ್ನೆರಡು ದಿನಗಳಲ್ಲಿ ತಡೆಗೋಡೆ  ನಿರ್ಮಾಣ ಮಾಡಲಾಗುವುದು ಎಂದು ಪ್ರಾಧಿಕಾರದ ಉಪ ಕಾರ್ಯದರ್ಶಿ ಬಸವರಾಜು ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version