ಬಸವ ಕಲ್ಯಾಣದಲ್ಲಿ ಬಿಜೆಪಿ 20 ಸಾವಿರ ಮತಗಳ ಅಂತರದಲ್ಲಿ ಭರ್ಜರಿ ಗೆಲುವು
02/05/2021
ಬೆಂಗಳೂರು: ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ್ದು, ಬಿಜೆಪಿ ಅಭ್ಯರ್ಥಿ ಶರಣು ಸಲಗರ 20,904 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ. ಅವರನ್ನು ಸೋಲಿಸಿದ್ದಾರೆ.
ಶರಣು ಸಲಗರ ಒಟ್ಟು 70,556 ಮತಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ. 50,108 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು ದಾಖಲಿಸಿದೆ.
ಜೆಡಿಎಸ್ ಅಭ್ಯರ್ಥಿ ಸೈಯದ್ ಅವರು 11,390 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿ ಮತಗಳು ಇತರ ಪಕ್ಷಗಳಿಗೆ ಹಂಚಿಕೆಯಾಗಿಲ್ಲ. ಹಾಗಾಗಿ ಅಭ್ಯರ್ಥಿಯ ಗೆಲುವು ಸುಲಭಕರವಾಗಿದೆ. ಜೆಡಿಎಸ್ ಜೊತೆ ಪಕ್ಷೇತರ ಅಭ್ಯರ್ಥಿಯ ಸ್ಪರ್ಧೆ ಕಾಂಗ್ರೆಸ್ ಗೆ ಪೆಟ್ಟು ನೀಡಿದೆ ಎಂದು ವಿಮರ್ಶಿಸಲಾಗಿದೆ.