ಮಹಿಳೆಯರ ಆಡಿಯೋ ವೈರಲ್ ಬೆನ್ನಲ್ಲೇ ಬಸವಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಶರಣು!
ಬೆಳಗಾವಿ: ಇಬ್ಬರು ಮಹಿಳೆಯರ ಆಡಿಯೋ ವೈರಲ್ ಆದ ಬೆನ್ನಲ್ಲೇ ಬೈಲಹೊಂಗಲ ತಾಲೂಕಿನ ನೇಗಿನಹಾಳದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿಯ ಮೃತದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. 50 ವರ್ಷ ವಯಸ್ಸಿನ ಸ್ವಾಮೀಜಿಯ ಸಾವಿಗೆ ನಿಖರ ಕಾರಣಗಳು ಇನ್ನೂ ತಿಳಿದು ಬಂದಿಲ್ಲ. ಆದರೆ, ಇಬ್ಬರು ಮಹಿಳೆಯರ ಸಂಭಾಷಣೆಯ ಆಡಿಯೋದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಸವಸಿದ್ಧಲಿಂಗ ಸ್ವಾಮೀಜಿಯ ಹೆಸರು ಕೂಡ ಕೇಳಿ ಬಂದಿತ್ತು ಎನ್ನಲಾಗಿದೆ.
ಆಡಿಯೋದಿಂದ ಮನನೊಂದು ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡರೇ ಎಂಬ ಶಂಕೆ ಮೂಡಿದ್ದು, ಸ್ಥಳಕ್ಕೆ ಬೈಲಹೊಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka