ಬಟ್ಟೆಯ ಮೇಲಿನಿಂದ ಸ್ಪರ್ಶಿಸಿದರೆ ಅದು ಲೈಂಗಿಕ ದೌರ್ಜನ್ಯವಲ್ಲ | ಬಾಂಬೆ ಹೈಕೋರ್ಟ್ ನ ವಿಚಿತ್ರ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ - Mahanayaka
7:28 AM Thursday 19 - September 2024

ಬಟ್ಟೆಯ ಮೇಲಿನಿಂದ ಸ್ಪರ್ಶಿಸಿದರೆ ಅದು ಲೈಂಗಿಕ ದೌರ್ಜನ್ಯವಲ್ಲ | ಬಾಂಬೆ ಹೈಕೋರ್ಟ್ ನ ವಿಚಿತ್ರ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ

27/01/2021

ನವದೆಹಲಿ: ಬಾಂಬೆ ಹೈಕೋರ್ಟ್ ನ ವಿವಾದಿತ ತೀರ್ಪಿಗೆ ಸುಪ್ರೀಂ ಕೊರ್ಟ್ ತಡೆ ನೀಡಿದೆ. ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಆಕ್ಷೇಪಾರ್ಹ ತೀರ್ಪು ನೀಡಿತ್ತು.

ಬಟ್ಟೆ ಧರಿಸಿದ್ದ ವೇಳೆ ಖಾಸಗಿ ಅಂಗ ಸ್ಪರ್ಶಿಸಿದರೆ ಅದು ಲೈಂಗಿಕ ದೌರ್ಜನ್ಯವಲ್ಲ ಎಂದು ಕೋರ್ಟ್ ತೀರ್ಪು ನೀಡಿದ್ದು, ಇಂತಹ ಪ್ರಕರಣಗಳಲ್ಲಿ ಪೋಕ್ಸೋ ಕಾಯ್ದೆಯಡಿ ಶಿಕ್ಷೆ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿತ್ತು.

ಬಾಂಬೆ ಹೈಕೋರ್ಟ್‌ ನೀಡಿದ್ದ ತೀರ್ಪಿನ ಬಗ್ಗೆ ನ್ಯಾಯಾಲಯದಲ್ಲಿ ವಾದ ಮಾಡಿದ ಅಡ್ವೋಕೇಟ್ ಜನರಲ್ ಈ ತೀರ್ಪು ಅಪಾಯಕಾರಿಯಾಗಿದ್ದು, ಇದಕ್ಕೆ ತಡೆ ನೀಡಬೇಕು ಅಂಥ ನ್ಯಾಯಾಪೀಠದ ಮುಂದೆ ಮನವಿ ಮಾಡಿಕೊಂಡಿದ್ದರು.


Provided by

ಈ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ಬಾಂಬೆ ಹೈಕೋರ್ಟ್ ತೀರ್ಪಿಗೆ ತಡೆ ನೀಡಿದೆ.  ಚರ್ಮದಿಂದ ಚರ್ಮಕ್ಕೆ ಸ್ಪರ್ಶಿಸಿದಾಗ ಮಾತ್ರವೇ ಅದು ಲೈಂಗಿಕ ದೌರ್ಜನ್ಯವಾಗುತ್ತದೆ. ಬಟ್ಟೆಯ ಮೇಲಿನಿಂದ ಸ್ಪರ್ಶಿಸಿದರೆ, ಅದು ಫೋಕ್ಸೋ ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ನ ನ್ಯಾಯಾಧೀಶರಾದ ಪುಷ್ಪಾ ಗನೇಡಿವಾಲಾ ತೀರ್ಪು ನೀಡಿ, ಆರೋಪಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ್ದರು. ಇದರ ವಿರುದ್ಧ ವಕೀಲರೊಬ್ಬರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಇತ್ತೀಚಿನ ಸುದ್ದಿ