ಬಾಯಿ ಮುಚ್ಚು, ಇದು ನಿನಗೆ ಒಳ್ಳೆಯದಲ್ಲ: ಪತ್ರಕರ್ತನಿಗೆ ಬಹಿರಂಗವಾಗಿ ಬೆದರಿಕೆಯೊಡ್ಡಿದ ಯೋಗ ಗುರು ರಾಮದೇವ್
ನವದೆಹಲಿ: ಯೋಗ ಗುರು ರಾಮದೇವ್ ಅವರು ಪೆಟ್ರೋಲ್ ಬೆಲೆ ಇಳಿಕೆ ಕುರಿತು ಈ ಹಿಂದೆ ನೀಡಿದ್ದ ಹೇಳಿಕೆ ಕುರಿತಂತೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಬಾಯಿ ಮುಚ್ಚು, ಸುಮ್ಮನೆ ನೀವು ಮತ್ತೆ, ಮತ್ತೆ ಇದೇ ಪ್ರಶ್ನೆ ಕೇಳುತ್ತಿದ್ದರೆ, ಅದು ಸರಿ ಇರುವುದಿಲ್ಲ. ಬಹಿರಂಗವಾಗಿ ಬೆದರಿಕೆಯೊಡ್ಡಿರುವ ಘಟನೆ ವರದಿಯಾಗಿದೆ.
ಹರಿಯಾಣದ ಕರ್ನಾಲ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪತ್ರಕರ್ತರೊಬ್ಬರು ಜನರು ಲೀಟರ್‌ಗೆ ಪೆಟ್ರೋಲ್ 40ರೂ. ಮತ್ತು ಸಿಲಿಂಡರ್ 300 ರೂ. ಬೆಲೆಯನ್ನು ನಿಗದಿಪಡಿಸುವ ಸರ್ಕಾರವನ್ನು ಪರಿಗಣಿಸಬೇಕು ಎಂದು ನೀವು ಈ ಹಿಂದೆ ಹೇಳಿದ್ದಿರಿ ಎಂದು ಪ್ರಶ್ನಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಯೋಗ ಗುರು ರಾಮದೇವ್, ಹೌದು ನಾನು ಹೇಳಿದ್ದೆ, ಈಗ ನೀವು ಏನು ಮಾಡಬಹುದು? ಇಂತಹ ಪ್ರಶ್ನೆಗಳನ್ನು ಕೇಳತ್ತಾ ಇರಬೇಡಿ. ನಿಮ್ಮ ಪ್ರಶ್ನಿಗಳಿಗೆಲ್ಲಾ ಉತ್ತರಿಸುತ್ತಾ ಇರಲು ನಾನು ಗುತ್ತಿಗೆದಾರನಲ್ಲ ಎಂದರು.
ಮತ್ತೊಮ್ಮೆ ಇದೇ ಪ್ರಶ್ನೆಯನ್ನು ಕೇಳಿದಾಗ, ನಾನು ಹೇಳಿಕೆ ನೀಡಿದ್ದೇನೆ, ಅದಕ್ಕೆ ಈಗ ನೀವು ಏನು ಮಾಡುತ್ತೀರಾ? ಬಾಯಿ ಮುಚ್ಚು, ಸುಮ್ಮನೆ ನೀವು ಮತ್ತೆ, ಮತ್ತೆ ಇದೇ ಪ್ರಶ್ನೆ ಕೇಳುತ್ತಿದ್ದರೆ, ಅದು ಸರಿ ಇರುವುದಿಲ್ಲ. ನೀನು ಸಭ್ಯ ತಂದೆ, ತಾಯಿಯ ಮಗನಾಗಿರದ್ದರೆ, ಈ ರೀತಿ ಮಾತನಾಡುವುದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವೈದ್ಯೆ ಅರ್ಚನಾ ಶರ್ಮಾ ಆತ್ಮಹತ್ಯೆ ಪ್ರಕರಣ: ಬಿಜೆಪಿ ನಾಯಕ ಜಿತೇಂದ್ರ ಗೋಥ್ವಾಲ್ ಪೊಲೀಸ್ ವಶಕ್ಕೆ
ಮತ್ತೆ ಪೆಟ್ರೋಲ್, ಡೀಸೆಲ್ ಲೀಟರ್‌ಗೆ 80 ಪೈಸೆ ಏರಿಕೆ
ಲಾರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಚಾಲಕ
ಹಲಾಲ್ ಮಾಂಸ ವಿವಾದ: ಪ್ರಚೋದನಾಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ | ಅರಗ ಜ್ಞಾನೇಂದ್ರ