ನಿಯಮ ಉಲ್ಲಂಘನೆ ಆರೋಪ: ಬಿಬಿಸಿ ವರ್ಲ್ಡ್ ಸರ್ವಿಸ್ ಇಂಡಿಯಾಕ್ಕೆ ಕೋಟಿ ಕೋಟಿ ದಂಡ

ವಿದೇಶಿ ನೇರ ಹೂಡಿಕೆ ಎಫ್‌ಡಿಐ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಬಿಬಿಸಿ ವರ್ಲ್ಡ್ ಸರ್ವಿಸ್ ಇಂಡಿಯಾಕ್ಕೆ 3.44 ಕೋಟಿ ರೂ.ಗಳಿಗೂ ಹೆಚ್ಚು ದಂಡ ವಿಧಿಸಿದೆ.
2002 ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯ ಪಾತ್ರದ ಬಗ್ಗೆ ಬಿಬಿಸಿ ಸಾಕ್ಷ್ಯಚಿತ್ರ ಬಿಡುಗಡೆಯಾದ ನಂತರ ಈಡಿ ದಾಳಿಗಳು ನಡೆದಿದ್ದವು.
ಈ ಹಂತದಲ್ಲಿ, ಬಿಬಿಸಿ ವರ್ಲ್ಡ್ ಸರ್ವಿಸ್ ಇಂಡಿಯಾ ಅಥವಾ ಅದರ ನಿರ್ದೇಶಕರು ಜಾರಿ ನಿರ್ದೇಶನಾಲಯದಿಂದ ಯಾವುದೇ ತೀರ್ಪು ಆದೇಶವನ್ನು ಪಡೆದಿಲ್ಲ” ಎಂದು ಬಿಬಿಸಿ ವಕ್ತಾರರು ಪಿಟಿಐಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗುಜರಾತ್ ಗಲಭೆಯ ಹಿನ್ನೆಲೆಯಲ್ಲಿ ನರೇಂದ್ರ ಮೋದಿಯವರನ್ನು ಹೊಣೆಗಾರರನ್ನಾಗಿ ಬಿಬಿಸಿ ತಯಾರಿಸಿದ ಸಾಕ್ಷ್ಯಚಿತ್ರ ಭಾರತದಲ್ಲಿ ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರ ನಿಷೇಧ ಹೇರಿತ್ತು. ಇದರ ಹಿಂದೆಯೇ ಈ ಡಿ ಬಿಬಿಸಿ ಕಚೇರಿಗಳ ಮೇಲೆ ದಾಳಿ ನಡೆಸಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj