ಬೀಟಮ್ಮ ಗ್ಯಾಂಗಿನ ಆನೆ ಸಾವು ಪ್ರಕರಣ: ಮೂವರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು
ಚಿಕ್ಕಮಗಳೂರು: ಬೀಟಮ್ಮ ಗ್ಯಾಂಗಿನ ಸಲಗ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದ ಘಟನೆಗೆ ಸಂಬಂಧಿಸಿದಂತೆ ಮೂವರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅರಣ್ಯ ಇಲಾಖೆಯಲ್ಲಿ ಮೆಸ್ಕಾಂ ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಆಲ್ದೂರು ಸಮೀಪ ಕಾಡಾನೆ ಮೃತಪಟ್ಟಿತ್ತು, ಈ ಘಟನೆ ಸಂಬಂಧ ಅರಣ್ಯಾಧಿಕಾರಿ ಹರೀಶ್ ದೂರಿನ ಅನ್ವಯ ಪ್ರಕರಣ ದಾಖಲು ಮಾಡಲಾಗಿದೆ.
ಮೆಸ್ಕಾಂನ ಜ್ಯೂನಿಯರ್ ಎಂಜಿನಿಯರ್, ಅಸಿಸ್ಟೆಂಟ್ ಎಂಜಿನಿಯರ್, ಎಕ್ಸಿಕ್ಯೂಟಿವ್ ಎಂಜಿನಿಯರ್ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಮೂವರ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ. ಆಹಾರ ಅರಸಿ ಕಾಡಿನಿಂದ ನಾಡಿಗೆ ಬರುತ್ತಿರುವ ಆನೆಗಳು ವಿದ್ಯುತ್ ಶಾಕ್ ಗೆ ಬಲಿಯಾಗುತ್ತಿವೆ. ಇದು ಗಂಭೀರ ಘಟನೆಯಾಗಿದ್ದು, ಅರಣ್ಯಾಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎನ್ನುವ ಮಾತುಗಳು ಕೂಡ ಕೇಳಿ ಬಂದಿವೆ.
ಬೀಟಮ್ಮನ ಗ್ಯಾಂಗ್:
ಕಾಫಿನಾಡಲ್ಲಿ ಬೀಟಮ್ಮ ನೇತೃತ್ವದ 17 ಕಾಡಾನೆಗಳ ಹಿಂಡು ಆಹಾರ ಅರಸಿ ಸುತ್ತುತ್ತಿವೆ. ನಾಡಿಗೆ ಎಂಟ್ರಿಕೊಟ್ಟು ಕಾಫಿ ತೋಟ ಸೇರಿದಂತೆ ರೈತರ ಕೃಷಿಗಳನ್ನು ಧ್ವಂಸಗೊಳಿಸುತ್ತಿವೆ. ಈ 17 ಆನೆಗಳ ಪೈಕಿ 1 ಕಾಡಾನೆ ಚಿಕ್ಕಮಗಳೂರು ತಾಲೂಕಿನ ತುಡುಕೂರು ಬಳಿ ಕಾಫಿ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: