ಬೀದಿ ನಾಯಿಯಿಂದ ದಾಳಿ: ಮಗುವಿಗೆ ತೀವ್ರ ಗಾಯ
12/05/2023
ಕಾಪು: ಬೀದಿ ನಾಯಿಯೊಂದು ದಾಳಿ ನಡೆಸಿದ ಪರಿಣಾಮ ಮಗುವೊಂದು ತೀವ್ರವಾಗಿ ಗಾಯಗೊಂಡ ಘಟನೆ ಇಂದು ಸಂಜೆ ಉಚ್ಚಿಲದ ಪೊಲ್ಯ ಎಂಬಲ್ಲಿ ನಡೆದಿದೆ.
ಗಾಯಗೊಂಡ ಮಗುವನ್ನು ಅಜ್ಜರಕಾಡು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲ್ಯ ಪರಿಸರದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಿದ್ದು ಹಲವರಿಗೆ ಕಚ್ಚಿರುವುದಾಗಿ ಗ್ರಾಮಸ್ಥರು ದೂರಿದ್ದಾರೆ.
ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದು, ಕೂಡಲೇ ಈ ನಾಯಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw