ಅಮಾನವೀಯ: ಕಳ್ಳತನದ ಸುಳ್ಳು ಆರೋಪ ಹೊರಿಸಿ ಭಿಕ್ಷುಕನ ಮೇಲೆ ಮಾರಣಾಂತಿಕ ಹಲ್ಲೆ; ಸಾವು
ತೆಲಂಗಾಣದ ಮೆದಕ್ ಜಿಲ್ಲೆಯ ಗೋಮರಂ ಗ್ರಾಮದಲ್ಲಿ ಭಿಕ್ಷುಕನ ಮೇಲೆ ಮೂವರು ವ್ಯಕ್ತಿಗಳು ಕ್ರೂರವಾಗಿ ಹಲ್ಲೆ ಮಾಡಿದ ಘಟನೆ ರಾತ್ರಿ ನಡೆದಿದೆ.
ಮೇಡಕ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಉದಯ್ ಕುಮಾರ್ ಅವರ ಪ್ರಕಾರ, ಕಳ್ಳತನದ ಸುಳ್ಳು ಆರೋಪ ಹೊರಿಸಿ ಸಂತ್ರಸ್ತನ ಮೇಲೆ ಹಲ್ಲೆ ನಡೆಸಲಾಗಿದೆ. ಆ ವ್ಯಕ್ತಿಯು ಮಲಗಲು ಸ್ಥಳೀಯ ಬಸ್ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದಾಗ ದಾಳಿಕೋರರು ಆತನನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಕಳ್ಳತನ ಆರೋಪವನ್ನು ಹೊರಬೇಕೆಂದು ಹೇಳಿದಾಗ ಸಂತ್ರಸ್ತ ಅದಕ್ಕೆ ಒಪ್ಪದಿದ್ದಾಗ ತೀವ್ರವಾಗಿ ದೈಹಿಕ ಹಲ್ಲೆ ನಡೆಸಲಾಗಿದೆ. ಹೀಗಾಗಿ ತೀವ್ರ ಹಲ್ಲೆಗೊಳಗಾದ ಸಂತ್ರಸ್ತ ಸೂಕ್ತ ಚಿಕಿತ್ಸೆ ಇಲ್ಲದೇ ಸಾವನ್ನಪ್ಪಿದ್ದಾನೆ.
ಘಟನೆಯ ನಂತರ, ಪೊಲೀಸರು ಶವಪರೀಕ್ಷೆಗಾಗಿ ದೇಹವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ಪ್ರಾರಂಭವಾದ ಸ್ವಲ್ಪ ಸಮಯದ ನಂತರ ಗಂಗಿ ರೆಡ್ಡಿ, ತಿರುಪತಿ ರೆಡ್ಡಿ ಮತ್ತು ಮಣಿಕಾಂತ ಗೌಡ ಎಂಬ ಆರೋಪಿಗಳನ್ನು ಬಂಧಿಸಲಾಯಿತು. ಎಸ್ಪಿ ಉದಯ್ ಕುಮಾರ್ ಅವರು ಈ ಬಂಧನವನ್ನು ದೃಢಪಡಿಸಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth