ಕಾರ್ಯಾಚರಣೆ ವೇಳೆ ನಾಲ್ಕನೇ ಅಂತಸ್ತಿನಿಂದ ಬಿದ್ದ ಅಗ್ನಿಶಾಮಕ ಸಿಬ್ಬಂದಿ
ಬೆಂಗಳೂರು: ನಗರದ ಬಾಗಮನೆ ಟೆಕ್ ಪಾರ್ಕ್ ನಲ್ಲಿ ಶನಿವಾರ ರಾತ್ರಿ ಭೀಕರ ಅಗ್ನಿ ಅನಾಹುತ ಸಂಭವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರು ಆಯತಪ್ಪಿ ನಾಲ್ಕನೇ ಅಂತಸ್ತಿನಿಂದ ಕೆಳಗೆ ಬಿದ್ದು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಮಾರತ್ತಹಳ್ಳಿಯ ಟೆಕ್‌ಪಾರ್ಕ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದರೆ ಈ ವೇಳೆ ಮಹದೇವಪುರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವಿನಯ್ ಕುಮಾರ್ ಎಂಬವರು ಆಯತಪ್ಪಿ ನಾಲ್ಕನೇ ಅಂತಸ್ತಿನಿಂದ ಕೆಳಗೆ ಬಿದ್ದಿದ್ದಾರೆ. ಪರಿಣಮ ಕೈಕಾಲು ಮತ್ತು ತಲೆಯ ಭಾಗಕ್ಕೆ ಗಾಯಗಳಾಗಿವೆ. ತಕ್ಷಣ ಅವರನ್ನು ಆಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಗ್ನಿ ಅನಾಹುತಕ್ಕೆ ಶಾರ್ಟ್ ಸರ್ಕೀಟ್ ಕಾರಣ ಎಂದು ಹೇಳಲಾಗಿದೆ. ಟೆಕ್‌ಪಾರ್ಕ್‌ನಲ್ಲಿನ ಲೊಗ್ಯಾಟೋ ಕಂಪೆನಿಯ 5 ಮತ್ತು 6ನೇ ಮಹಡಿಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸುಮಾರು 12 ಅಗ್ನಿಶಾಮಕ ವಾಹನಗಳು ಮತ್ತು 30 ಸಿಬ್ಬಂದಿ ರಾತ್ರಿ ಸ್ಥಳಕ್ಕೆ ಧಾವಿಸಿ, ಏಣಿ ಬಳಸಿ ಬೆಂಕಿ ಆರಿಸುವ ಕಾರ್ಯ ಆರಂಭಿಸಿದರು. ಸತತ ಮೂರು ಗಂಟೆ ಪ್ರಯತ್ನದ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸ್ನೇಹಿತನೊಂದಿಗೆ ಹೊಟೇಲ್‍ನಲ್ಲಿ ತಂಗಿದ್ದ ಯುವತಿ ನಿಗೂಢ ಸಾವು
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ನಾಳೆ, ನಾಡಿದ್ದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ಮಹಿಳೆಯರಿಗೆ ವಾಟ್ಸಾಪ್ ನಲ್ಲಿ ಅಶ್ಲೀಲ ಸಂದೇಶ ಕಳಿಸಿ ಪೊಲೀಸರಿಗೆ ಸವಾಲು ಹಾಕಿದಾತನ ಅರೆಸ್ಟ್
ಉಕ್ರೇನ್‌ನಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಸ್ವಾಗತಿಸಿದ ಸಿಎಂ ಬೊಮ್ಮಾಯಿ
ಹರ್ಷ ಕೊಲೆ ಪ್ರಕರಣ: ಎನ್ ಐಎಗೆ ಹಸ್ತಾಂತರಗೊಳ್ಳುವ ನಿರೀಕ್ಷೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ