ಭೀಕರ ಅಪಘಾತ: ಮಾಜಿ ಶಾಸಕ ಎಸ್.ಬಾಲರಾಜು ಸೇರಿ ಮೂವರಿಗೆ ಗಾಯ - Mahanayaka

ಭೀಕರ ಅಪಘಾತ: ಮಾಜಿ ಶಾಸಕ ಎಸ್.ಬಾಲರಾಜು ಸೇರಿ ಮೂವರಿಗೆ ಗಾಯ

balaraju
10/02/2022

ಚಾಮರಾಜನಗರ: ತಾಲೂಕಿನ ಬಾಣಳ್ಳಿ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕೊಳ್ಳೇಗಾಲ ಮಾಜಿ ಶಾಸಕ ಎಸ್.ಬಾಲರಾಜು ಸೇರಿ ಮೂವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಬುಧವಾರ ರಾತ್ರಿ ಮಾಜಿ ಶಾಸಕ ಎಸ್.ಬಾಲರಾಜು ಅವರು ಕಾರಿನಲ್ಲಿ ಯಳಂದೂರಿನಿಂದ ಮೈಸೂರಿಗೆ ತೆರಳುತ್ತಿದ್ದರು. ಈ ವೇಳೆ ಬಾಣಳ್ಳಿ ಗೇಟ್ ಬಳಿ ಕಾರು ಮತ್ತು ಅಶೋಕ ಲೈಲ್ಯಾಂಡ್ ಗಾಡಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಬಾಲರಾಜು ಅವರ ಕಾರಿನಲ್ಲಿ ಏರ್ ಬ್ಯಾಗ್ ಇದ್ದದ್ದರಿಂದ ಅವರಿಗೆ ಮತ್ತು ಕಾರು ಚಾಲಕನಿಗೆ ಹೆಚ್ಚು ಗಾಯವಾಗಿಲ್ಲ. ಆದರೆ ಅಶೋಕ ಲೈಲ್ಯಾಂಡ್ ಗಾಡಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್​ನ ಸ್ಥಿತಿ ಗಂಭೀರವಾಗಿದೆ.

ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಮೈಸೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಸಂತೇಮರಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಿಜಾಬ್ -ಕೇಸರಿ ಶಾಲು ವಿವಾದ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ

ಅಭಿವೃದ್ಧಿಯ ಹರಿಕಾರ ಪ್ರೀತಂ ಗೌಡ ಅವರಿಗೆ ಸಚಿವ ಸ್ಥಾನ ನೀಡಿ: ಯುವ ಬಿಜೆಪಿ ಮುಖಂಡ ಲಿಖಿತ್ ಗೌಡ ಒತ್ತಾಯ

ಹಿಜಬ್-ಕೇಸರಿ ವಿವಾದ: ಶಾಲೆಗಳು ಧರ್ಮ ಪ್ರದರ್ಶನದ ಸ್ಥಳವಲ್ಲ; ನಟಿ ಖುಷ್ಬೂ

ಮುಸ್ಲಿಂ ಶಿಕ್ಷಣ ಸಂಸ್ಥೆಯಲ್ಲಿ ಹಿಂದೂ ವಿದ್ಯಾರ್ಥಿನಿಯವರು ಬುರ್ಖಾ ಧರಿಸಬೇಕಾ?: ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ

ಅಕ್ರಮ ಸಂಬಂಧ ಗಂಡನಿಗೆ ಗೊತ್ತಾದ ಹಿನ್ನಲೆ: ಪತಿಯನ್ನೇ ಕೊಲೆ ಮಾಡಿಸಿದ ಪತ್ನಿ

 

ಇತ್ತೀಚಿನ ಸುದ್ದಿ