ಭೀಕರ ಅಪಘಾತ: ಬಸ್, ಟಾಟಾ ಏಸ್ ವಾಹನದ ನಡುವೆ ಸಿಲುಕಿದ ತಂದೆ, ಮಗಳು ಸಾವು - Mahanayaka
5:00 AM Tuesday 10 - December 2024

ಭೀಕರ ಅಪಘಾತ: ಬಸ್, ಟಾಟಾ ಏಸ್ ವಾಹನದ ನಡುವೆ ಸಿಲುಕಿದ ತಂದೆ, ಮಗಳು ಸಾವು

kolara
16/09/2021

ಕೋಲಾರ: ಕೆಸ್ಸಾರ್ಟಿಸಿ ಬಸ್ ಹಾಗೂ  ಟಾಟಾ ಏಸ್ ವಾಹನ ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ತಂದೆ ಹಾಗೂ ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೋಲಾರ ಚಿಂತಾಮಣಿ ರಸ್ತೆಯಲ್ಲಿ ನಡೆದಿದೆ.

ಕೋಲಾರ ತಾಲೂಕಿನ ಮದ್ದನಹಳ್ಳಿ ಬಳಿಯ ಮುರಾರ್ಜಿ ಶಾಲೆಯ ಮುಂಭಾಗದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಟಾಟಾ ಏಸ್ ವಾಹನದ ನಡುವೆ  ಬೈಕ್ ನಲ್ಲಿ ಸಂಚರಿಸುತ್ತಿದ್ದ ತಂದೆ ಹಾಗೂ ಮಗಳು ಸಿಲುಕಿಕೊಂಡು ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಸಾವನ್ನಪ್ಪಿರುವ ತಂದೆ ಮಗಳ ಗುರುತು ಪತ್ತೆಯಾಗಿಲ್ಲ.  ಎರಡೂ ಕಡೆಯಿಂದ ಬಂದ ವಾಹನಗಳ ನಡುವೆ ಬೈಕ್ ಸಿಲುಕಿದ್ದು, ಈ ವೇಳೆ ತಂದೆ ಮಗಳ ಇಬ್ಬರೂ ಸಾವಿಗೀಡಾಗಿದ್ದಾರೆ. ಇನ್ನೂ ಈ ಅಪಘಾತ ಕೆಎಸ್ಸಾರ್ಟಿಸಿ ಬಸ್ ಚಾಲನ ನಿರ್ಲಕ್ಷ್ಯದಿಂದ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.

ಬೆಂಗಳೂರಿನಲ್ಲಿ ಕಳೆದೆರಡು ವಾರಗಳಿಂದ ಭೀಕರ ಅಪಘಾತಗಳು ನಡೆದಿತ್ತು. ಇದರ ಬೆನ್ನಲ್ಲೇ ಇದೀಗ ಕೋಲಾರದಲ್ಲಿ ಕೂಡ ಭೀಕರ ಅಪಘಾತ ನಡೆದಿದ್ದು, ತಂದೆ ಮಗಳು ಇಬ್ಬರು ಕೂಡ ಸಾವನ್ನಪ್ಪಿದ್ದಾರೆ

ಇದನ್ನೂ ಓದಿ…

ಮದುವೆಯಾಗುವುದಿಲ್ಲ ಎಂದ ಯುವತಿ! | ಗ್ರಾಮಕ್ಕೆ ಓಡಿ ಬಂದ ಅಧಿಕಾರಿಗಳ ದಂಡು

ರಾತ್ರೋ ರಾತ್ರಿ ಇಬ್ಬರು ಹುಡುಗರ ಖಾತೆಗೆ ಜಮಾ ಆಯಿತು 900 ಕೋಟಿಗೂ ಅಧಿಕ ಹಣ!

ಟ್ರಾಫಿಕ್ ಸಿಗ್ನಲ್ ನಲ್ಲಿ ಡಾನ್ಸ್ ಮಾಡಿ ಸಂಕಷ್ಟಕ್ಕೀಡಾದ ಯುವತಿ!

ಹೃದಯ ವಿದ್ರಾವಕ ಘಟನೆ: ಹುಟ್ಟುಹಬ್ಬದಂದೇ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಮಗು

ಶಾಕಿಂಗ್ ನ್ಯೂಸ್: ಭಾರತದಲ್ಲಿ ಪ್ರತಿದಿನ 80 ಕೊಲೆ, 77 ಅತ್ಯಾಚಾರ ಪ್ರಕರಣಗಳು ದಾಖಲಾಗ್ತಿವೆ!

ಕಬಡ್ಡಿ ತರಬೇತಿ ಕೇಂದ್ರದಲ್ಲಿ ತಂದೆ, ಮಗನಿಂದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ!

ಇತ್ತೀಚಿನ ಸುದ್ದಿ