ಭೀಕರ ಅಪಘಾತಕ್ಕೆ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಬಲಿ - Mahanayaka

ಭೀಕರ ಅಪಘಾತಕ್ಕೆ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಬಲಿ

death
04/05/2022

ದಾವಣಗೆರೆ:  ಭೀಕರ ಅಪಘಾತವೊಂದರಲ್ಲಿ  ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕುಂದುವಾಡ ಕ್ರಾಸ್ ಬಳಿ ನಡೆದಿದೆ.

ಮೃತರು ಶಿವಮೊಗ್ಗ ಮೂಲದವರಾಗಿದ್ದು, ಜಬೀವುಲ್ಲಾ (45), ಅವರ ಪತ್ನಿ ಹಮೀದಾ (43), ಮೊಮ್ಮಗಳು ಗೌಸಿಯಾ ಬಾನು (4) ಎಂದು ಗುರುತಿಸಲಾಗಿದೆ. ಮೃತರ ಪೈಕಿ ಹಮೀದಾ, ಗೌಸಿಯಾ ಸ್ಥಳದಲ್ಲೇ ಮೃತಪಟ್ಟರೆ ಜಬೀವುಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ದಾವಣಗೆರೆ ದಕ್ಷಿಣ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಯುವತಿಯ ಮೇಲೆ ಅತ್ಯಾಚಾರ: ಬಾಡಿ ಬಿಲ್ಡರ್ ನ ಬಂಧನ

ಡ್ರೋಣ್ ಮೂಲಕ ಆಹಾರ ವಿತರಿಸಲು ಮುಂದಾದ ಸ್ವಿಗ್ಗಿ!

ರೈಲು ನಿಲ್ಲಿಸಿ ಎಣ್ಣೆ ಹೊಡೆಯಲು ಹೋದ ಲೋಕೋ ಪೈಲೆಟ್

ದೂರು ನೀಡಲು ಬಂದಿದ್ದ ಅತ್ಯಾಚಾರ ಸಂತ್ರಸ್ತೆಯ ಮೇಲೆ ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ!

ಅಂತ್ಯಕ್ರಿಯೆಗೆ ಕೆಲವೇ ನಿಮಿಷ ಇರುವಾಗ ಶವಪೆಟ್ಟಿಗೆಯೊಳಗಿನಿಂದ ಕೇಳಿತು ಬಡಿಯುವ ಶಬ್ದ!

 

ಇತ್ತೀಚಿನ ಸುದ್ದಿ