ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು - Mahanayaka
8:27 PM Wednesday 5 - February 2025

ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು

accident
04/02/2022

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಕಿಶ್ವರ್‌ ಜಿಲ್ಲೆಯ ಕೇಶ್ವನ್‌ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾನೆ. ಮೃತರನ್ನು ಮೊಹಮ್ಮದ್‌ ಅರ್ಖಾನ್‌, ಅಬ್ದುಲ್‌ ರೆಹಮಾನ್‌, ಅಬ್ದುಲ್‌ ಲತೀಫ್‌, ಅತಾ ಮೊಹಮ್ಮದ್‌, ಇನಾಮ್‌ ಮತ್ತು ಜಮೀರ್‌ ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಸೇನಾ ಸಿಬ್ಬಂದಿ ಭೇಟಿ ನೀಡಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಜವಾದ ಕಾರಣ ಪತ್ತೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವೈದ್ಯಕೀಯ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಧರಣಿ

ಓಮಸತ್ವ, ಕಸ್ತೂರಿ ಮಾರಾಟ ಮಾಡುವ ನೆಪದಲ್ಲಿ ಮಹಿಳೆಯ ಅತ್ಯಾಚಾರ ಯತ್ನ

ಪಿಎಸ್‌ ಐ ನೇಮಕಾತಿಯಲ್ಲಿ ವಂಚನೆ: ಅಭ್ಯರ್ಥಿಗಳಿಂದ ಬೃಹತ್‌ ಪ್ರತಿಭಟನೆ

ನಿರ್ಮಾಣ ಹಂತದ ಕಟ್ಟಡ ಕುಸಿತ: 6 ಮಂದಿ ಬಡ ಕಾರ್ಮಿಕರು ಬಲಿ

ನಾಪತ್ತೆಯಾಗಿದ್ದ ಎಎಸ್‌ ಐ ನದಿಯಲ್ಲಿ ಶವವಾಗಿ ಪತ್ತೆ

 

ಇತ್ತೀಚಿನ ಸುದ್ದಿ