ಬೆಲೆ ಏರಿಕೆಯ ಬಿಸಿಯಿಂದ ಜನರನ್ನು ರಕ್ಷಿಸಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮತ್ತೆ ಕಚ್ಛಾ ತೈಲ ಬೆಲೆ ಹೆಚ್ಚಾಗುವ ನಿರೀಕ್ಷೆ ಇದೆ. ಇದರಿಂದ ದೇಶದ ಜನರಿಗೆ ಹೊರೆಯಾಗುವ ಸಾಧ್ಯತೆ ಇದೆ. ಕೂಡಲೇ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ.
ಟ್ವಿಟ್ಟರ್‌ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಹಣದುಬ್ಬರದ ಭಾರ ಎಲ್ಲಾ ಭಾರತೀಯರಿಗೂ ಹೊರೆಯಾಗಿ ಪರಿಣಮಿಸಿದೆ. ಅಶಕ್ತ ರಾಷ್ಟ್ರ ಉಕ್ರೇನ್ ಮೇಲೆ ಬಲಾಢ್ಯ ರಷ್ಯಾ ಯುದ್ಧ ಘೋಷಿಸುವ ಮುನ್ನವೇ ದಾಖಲೆಯ ಪ್ರಮಾಣದಲ್ಲಿ ಬೆಲೆ ಏರಿಕೆ ಆಗಿತ್ತು. ಇದರಿಂದ ಬಡ ಮತ್ತು ಮಧ್ಯಮ ವರ್ಗಕ್ಕೆ ಹೊರೆಯಾಗಿತ್ತು. ಬೆಲೆ ಏರಿಕೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಬ್ಯಾರಲ್ ಒಂದಕ್ಕೆ 100 ಡಾಲರ್ ಆಗಲಿದೆ. ಆಹಾರದ ಬೆಲೆಗಳಲ್ಲಿ ಶೇ. 22ರಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ಅಲ್ಲದೆ ಕೋವಿಡ್-19 ಮಹಾಮಾರಿ ಜಾಗತಿಕ ಪೂರೈಕೆ ಸರಪಳಿಗೆ ತಡೆಯೊಡ್ಡಲಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಬೆಲೆ ಏರಿಕೆಯ ಬಿಸಿಯಿಂದ ಜನರನ್ನು ರಕ್ಷಿಸಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಸೋಮವಾರ ಬಿಡುಗಡೆಯಾದ ಸರ್ಕಾರದ ಅಂಕಿಅಂಶಗಳ ಪ್ರಕಾರ ಕಚ್ಚಾ ತೈಲ ಹಾಗೂ ಆಹಾರೇತರ ವಸ್ತುಗಳ ಬೆಲೆ ಶೇ. 13.11ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಫೆ. 24 ರಂದು ಪ್ರಾರಂಭವಾದ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ನಂತರ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಬೆಲೆ ಏರಿಕೆಯು ಸಗಟು ಬೆಲೆ ಸೂಚ್ಯಂಕದ ಮೇಲೆ ಒತ್ತಡವನ್ನು ಉಂಟುಮಾಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಗುಜರಾತ್, ಲಖಿಂಪುರ್ ಘಟನೆಯನ್ನೂ ತೋರಿಸಲಿ: ವಿಪಕ್ಷ ನಾಯಕ ಸಿದ್ದರಾಮಯ್ಯ
ಮಗ ಹಾಗೂ ಮಗನ ಇಡೀ ಕುಟುಂಬವನ್ನೇ ಸುಟ್ಟು ಹಾಕಿದ ಪಾಪಿ ತಂದೆ!
ಬಿಜೆಪಿ, ಕಾಂಗ್ರೆಸ್ ವಿರುದ್ಧ ನಮ್ಮ ಹೋರಾಟ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ