ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಸಚಿವ ಆನಂದ್ ಸಿಂಗ್, ಜನಾರ್ದನ ರೆಡ್ಡಿಗೆ ಜಾಮೀನು
ಕಾರವಾರ: ಬೇಲೇಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಹಾಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕ ಬಿ. ನಾಗೇಂದ್ರ ಸೇರಿದಂತೆ 7 ಆರೋಪಿಗಳಿಗೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಜೆಎಂಎಫ್‌ಸಿ ಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿದೆ.
2007ರಲ್ಲಿ ಬೇಲೆಕೇರಿಯ ಬಂದರಿನಲ್ಲಿ ಅರಣ್ಯ ಇಲಾಖೆಯವರು 250 ಕೋಟಿ ಮೌಲ್ಯದ ಕಬ್ಬಿಣದ ಅದಿರನ್ನು ವಶಪಡಿಸಿಕೊಂಡಿದ್ದರು. ಈ ಅದಿರು ಸರ್ಕಾರದ ವಶದಲ್ಲಿರುವಾಗಲೇ ಅದಿರು ವಹಿವಾಟು ಕಂಪೆನಿಗಳು ಅಕ್ರಮವಾಗಿ ಹಡಗಿನ ಮೂಲಕ ವಿದೇಶಕ್ಕೆ ಸಾಗಿಸಿದ್ದವು. ಈ ಬಗ್ಗೆ ಲೋಕಾಯುಕ್ತವು ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆ, ಬಂದರು ಇಲಾಖೆ ಹಾಗೂ ಅದಿರು ಕಂಪೆನಿಗಳ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲಿಸಿತ್ತು.
ಪ್ರಕರಣವು ಗಂಭೀರ ಸ್ವರೂಪದ್ದಾಗಿದ್ದರಿಂದ ಸುಪ್ರೀಂ ಕೋರ್ಟ್ 2009ರಲ್ಲಿ ಈ ಪ್ರಕರಣದ ತನಿಖೆಯನ್ನು ಸಿಬಿಐನ ವಿಶೇಷ ತಂಡಕ್ಕೆ ವಹಿಸಿತ್ತು. ತನಿಖೆ ನಡೆಸಿದ ಸಿಬಿಐ ವಿಶೇಷ ತಂಡವು ಪ್ರಕರಣದಲ್ಲಿ 12 ಆರೋಪಿಗಳು ಪಾಲುದಾರರಾಗಿದ್ದಾರೆ ಎಂದು ದೋಷಾರೋಪಣ ಪಟ್ಟಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿತ್ತು. ಪ್ರಕರಣವನ್ನು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಆರೋಪಿಗಳು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿತ್ತು.
ಈ ಕುರಿತು ವಿಚಾರಣೆ ನಡೆಸಿದ ಅಂಕೋಲಾದ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಸೋಮವಾರ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಶಾಸಕ ಡಿ. ನಾಗೇಂದ್ರ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಸೇರಿ ಏಳು ಮಂದಿಗೆ ಜೆಎಂಎಫ್‌ಸಿ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ. ಇನ್ನುಳಿದ ಐವರು ನ್ಯಾಯಾಲಯಕ್ಕೆ ಹಾಜರಾಗಿಲ್ಲ ಎಂದು ತಿಳಿದುಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ರೈಲಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ
ದೇವಸ್ಥಾನದ ಆವರಣದಲ್ಲಿಯೇ ತಲೆಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಹತ್ಯೆ
ಕಬ್ಬಿಣ ಅದಿರು ಅಕ್ರಮ ಸಾಗಾಟ: 8 ಮಂದಿ ಆರೋಪಿಗಳ ಬಂಧನ
ಮಹಿಳೆಯರ ಹಕ್ಕುಗಳ ರಕ್ಷಕ: ಬಾಬಾಸಾಹೇಬ್ ಡಾ.ಅಂಬೇಡ್ಕರ್
ಬಜೆಟ್ ನಲ್ಲಿ ವಿಶ್ವಕರ್ಮ ಸಮಾಜದ ನಿರ್ಲಕ್ಷ್ಯ: ಸರ್ಕಾರದ ವಿರುದ್ಧ ಆಕ್ರೋಶ