ಬೆಳಗಾವಿ ಗಡಿ ವಿವಾದ: ರಾಜ್ಯ ಸರ್ಕಾರವನ್ನು ಎಚ್ಚರಿಸಿದ ಸಿದ್ದರಾಮಯ್ಯ - Mahanayaka

ಬೆಳಗಾವಿ ಗಡಿ ವಿವಾದ: ರಾಜ್ಯ ಸರ್ಕಾರವನ್ನು ಎಚ್ಚರಿಸಿದ ಸಿದ್ದರಾಮಯ್ಯ

siddaramaiha
21/11/2022

ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ರಾಜ್ಯ ಸರ್ಕಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.


Provided by

ಬೆಳಗಾವಿ ಗಡಿವಿವಾದದ ಬಗ್ಗೆ ನವಂಬರ್ 23ರಂದು ಸುಪ್ರೀಂ ಕೋರ್ಟ್ ನಡೆಸಲಿರುವ ವಿಚಾರಣೆಯನ್ನು ಎದುರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಭರದಿಂದ ಸಿದ್ಧತೆ ನಡೆಸಿದ್ದಾರೆ ಎಂದು ಅವರು ಹೇಳಿದರು.

ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ರಾಜ್ಯ ಮಂಡಿಸಬೇಕಾದ ವಾದದ ಬಗ್ಗೆ ಸಮಾಲೋಚನೆ ನಡೆಸಲು ವಿರೋಧ ಪಕ್ಷಗಳ ಸದಸ್ಯರನ್ನೊಳಗೊಂಡ ಸಮಿತಿ ರಚಿಸಿರುವುದು ಆ ರಾಜ್ಯ ಗಡಿವಿವಾದವನ್ನು ಎಷ್ಟೊಂದು ಗಂಭೀರವಾಗಿ ಸ್ವೀಕರಿಸಿದೆ ಎನ್ನುವುದಕ್ಕೆ ಸಾಕ್ಷಿ ಎಂದು ಸಿದ್ದರಾಮಯ್ಯ ಹೇಳಿದರು.


Provided by

ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಬದ್ಧವಾಗಿ ರಾಜ್ಯ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ನಮ್ಮ ಪಕ್ಷ ಬೆಂಬಲಿಸುತ್ತದೆ. ಕಾಲವ್ಯಯ ಮಾಡದೆ‌ ಮುಖ್ಯಮಂತ್ರಿಗಳು ವಿರೋಧ ಪಕ್ಷಗಳ ಸಭೆ ಕರೆದು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ‌ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ