ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ: ಇಬ್ಬರ ದಾರುಣ ಸಾವು
ಬೆಂಗಳೂರು: ನಗರದ ಬಿಡಿಎ ಟೋಲ್ ಬಳಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಸುಮುಖ್ (22) ಹಾಗೂ ಲೀನಾನಾಯ್ದು (19) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರು ಚಲಾಯಿಸುತ್ತಿದ್ದ ಸುಮುಖ್ ತನ್ನ ಸ್ನೇಹಿತೆ ಲೀನಾನಾಯ್ಡುರನ್ನು ಕರೆದುಕೊಂಡು ನೈಸ್ ರಸ್ತೆಯಲ್ಲಿ ಪಿಇಎಸ್ ಕಾಲೇಜ್ ಕಡೆಯಿಂದ ಸೋಂಪುರ ಕಡೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಅತಿ ವೇಗದ ಚಾಲನೆಯೇ ಅವಘಡಕ್ಕೆ ಕಾರಣವಾಗಿದ್ದು, ಎದುರಿನಿಂದ ಬರುತ್ತಿದ್ದ ಬಸ್ಗೆ ಕಾರು ಡಿಕ್ಕಿ ಹೊಡೆದು, ಎರಡೂ ವಾಹನಗಳು ಪಲ್ಟಿಯಾಗಿವೆ.
ಕಾರಿನಲ್ಲಿದ್ದ ಇಬ್ಬರೂ ತೀವ್ರ ಗಾಯಗಳಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಬಸ್ ಚಾಲಕನ ಕಾಲಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಬಸ್ಸಿನಲ್ಲಿದ್ದ ಇತರ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಾರು ಡಿಕ್ಕಿಯಾದ ರಭಸಕ್ಕೆ ಟೈರ್ ಕಳಚಿಕೊಂಡು ಮುಂದೆ ಹೋಗುತ್ತಿದ್ದ ಇನ್ನೊಂದು ಕಾರಿನ ಹಿಂಭಾಗಕ್ಕೆ ತಗುಲಿ ಜಖಂ ಆಗಿದೆ. ಸದ್ಯ ಕೆಂಗೇರಿ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸೆಖೆಯಿಂದ ತಪ್ಪಿಸಿಕೊಳ್ಳಲು ಆಟೋದ ಮೇಲೆಯೇ ಗಿಡ ನೆಟ್ಟ ಆಟೋ ಚಾಲಕ
ಗ್ರಾಹಕರಿಗೆ ಶಾಕ್ ನೀಡಲಿರುವ ಬ್ರಿಟಾನಿಯಾ: ಬಿಸ್ಕೆಟ್ ಗಳ ಬೆಲೆ ಹೆಚ್ಚಾಗಲಿದೆಯೇ?
ಕೆಜಿಎಫ್ 2 ಅಬ್ಬರಕ್ಕೆ ದಂಗಲ್ ಟೀಮ್ ಕಂಗಾಲ್! | ದಾಖಲೆ ಪುಡಿಗಟ್ಟಿದ ಸುಲ್ತಾನ
ಪತ್ನಿ ಮಗುವಿಗೆ ಬೆಂಕಿ ಹಚ್ಚಿ ಬಾವಿಗೆ ಹಾರಿದ ಪಾಪಿ ಪತಿ: ಮೂವರ ದುರಂತ ಸಾವು