ಬಳ್ಳಾರಿ: ಬಾಣಂತಿಯರ ಸರಣಿ ಸಾವು | ಲೋಕಾಯುಕ್ತ ಸ್ವಯಂ ಪ್ರೇರಿತ ಪ್ರಕರಣ ದಾಖಲು
ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಮುಖ್ಯ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಆದೇಶ ನೀಡಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಇಂದು ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದರ ಬೆನ್ನಲ್ಲೇ ಈ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.
ಐವರು ಬಾಣಂತಿಯರ ಸಾವಿನ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಔಷಧ ನಿಯಂತ್ರಕರು ಹಾಗೂ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಯಮಿತ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: