ಬೆಳ್ತಂಗಡಿ: ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ
28/11/2022
ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮೇರ್ಲ ಎಂಬಲ್ಲಿ ಮಹಿಳೆ ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಮೃತ ಮಹಿಳೆ ಸ್ಥಳೀಯ ನಿವಾಸಿ ರವಿ ಎಂಬವರ ಪತ್ನಿ ಬಿಂದು(48)ಎಂಬಾಕೆಯಾಗಿದ್ದಾರೆ. ಈಕೆ ನ.27ರಂದು ಮನೆಯಲ್ಲಿ ರಬ್ಬರಿಗೆ ಉಪಯೋಗಿಸುವ ಆ್ಯಸಿಡ್ ಸೇವಿಸಿದ್ದಾರೆ.
ಮನೆಯವರು ಈಕೆಯನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಆಕೆ ಸೋಮವಾರ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka