ನವ ಗುಳಿಗ ದೈವಗಳಿಗೆ ಕೋಲ ಸೇವೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ
ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ — ದೇವರುಗಳ ಮೊರೆ ಹೋಗುವುದು ಸಹಜ. ಅದರಂತೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜ ನವ ಗುಳಿಗ ದೈವಗಳಿಗೆ ಕೋಲ ಸೇವೆಯನ್ನು ನೀಡಿದ್ದಾರೆ.
ಹೌದು. ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವಗುಳಿಗರಿಗೆ ಕೋಲ ನೀಡುತ್ತೇನೆ ಎಂದು ಶಾಸಕ ಕಳೆದ ಚುನಾವಣಾ ಪೂರ್ವದಲ್ಲಿ ಹರಕೆ ಹೊತ್ತಿದ್ದರು. ಈ ಹಿನ್ನಲೆಯಲ್ಲಿ ಸೋಮವಾರ ರಾತ್ರಿ ಈ ಕೋಲ ಸೇವೆಯನ್ನು ನೋಡಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಅವರು ಕೋಲ ಸೇವೆಯನ್ನು ನೀಡಿದರು.
ತುಳುನಾಡಿನಲ್ಲಿ ನವಗುಳಿಗ ದೈವಗಳು ನೆಲೆಯಾದ ಏಕೈಕ ಕ್ಷೇತ್ರ ಬರ್ಕಜೆ. ಇಲ್ಲಿ ಹರಕೆ ಹೊತ್ತರೆ ಭಕ್ತರ ಮನಸಂಕಲ್ಪ ಈಡೇರುತ್ತದೆ ಎಂಬ ನಂಬಿಕೆಯಿದೆ. ಆದ್ದರಿಂದ ಹರೀಶ್ ಪೂಂಜಾ ಅವರು ಇಲ್ಲಿ ಹರಕೆ ಹೊತ್ತಿದ್ದರು. ಇದೀಗ ನವಗುಳಿಗರಿಗೆ ಕೋಲ ನೀಡಿದ್ದಾರೆ. ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ನವಗುಳಿಗ ದೈವಗಳ ಕೋಲ ಸೇವೆಯನ್ನು ಕಣ್ತುಂಬಿಕೊಂಡರು.
ನವಗುಳಿಗ ದೈವಗಳಿಗೆ ವಿಶೇಷವಾಗಿ ಗಗ್ಗರ ಸೇವೆ ನಡೆಯಿತು. ಕ್ಷೇತ್ರಕ್ಕೆ ಅಗಮಿಸಿದ ಶಾಸಕ ಹರೀಶ್ ಪೂಂಜರನ್ನು ಕ್ಷೇತ್ರದ ಧರ್ಮದರ್ಶಿ ರಮೇಶ್ ಬರ್ಕಜೆ ಅವರು ಕ್ಷೇತ್ರದ ಪರವಾಗಿ ಗೌರವಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw