ಗೂಡ್ಸ್ ವಾಹನ ದ್ವಿಚಕ್ರ ವಾಹನಕ್ಕೆ  ಡಿಕ್ಕಿ: ಬೈಕ್ ಸವಾರ ಸಾವು - Mahanayaka
10:47 PM Friday 27 - December 2024

ಗೂಡ್ಸ್ ವಾಹನ ದ್ವಿಚಕ್ರ ವಾಹನಕ್ಕೆ  ಡಿಕ್ಕಿ: ಬೈಕ್ ಸವಾರ ಸಾವು

belthangady
26/12/2022

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ. 25 ಸಂಜೆ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.

ಉಜಿರೆಯಿಂದ ಬೆಳ್ತಂಗಡಿ ಕಡೆಗೆ  ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ  , ತರಕಾರಿ ಖಾಲಿ ಮಾಡಿ ವಾಪಸ್ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ.‌ಈ ವೇಳೆ ರಸ್ತೆಗೆಸೆಯಲ್ಪಟ್ಟು ಸವಾರ ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿ ಅಣ್ಣಿ ಪೂಜಾರಿಯ ಪುತ್ರ ವೃತ್ತಿಯಲ್ಲಿ ಫೈಂಟರ್ ಕೆಲಸ ಮಾಡುತ್ತಿದ್ದ ಪುರುಷೋತ್ತಮ ಪೂಜಾರಿ(20) ಸಾವನ್ನಪ್ಪಿದವನು ಎಂದು ಗುರುತಿಸಲಾಗಿದೆ. ಶವವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಲಾಗಿದ್ದು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಯಿ ಹಾಗೂ ಇಬ್ಬರು ಸಹೋದರಿಯರು ಇದ್ದು,ಈತ ಕುಟುಂಬದ ಆಧಾರ ಸ್ತಂಭವಾಗಿದ್ದು,ತೀರಾ ಹಿಂದುಳಿದ ಕುಟುಂಬ ಕಂಗಾಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ