ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ವಯಸ್ಸಿನ ಬಾಲಕಿಯಿಂದ ಆತ್ಮಹತ್ಯೆಗೆ ಯತ್ನ
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಮಾನಸಿಕ ಖಿನ್ನತೆ ಹೊಂದಿರುವ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ನಡೆಸಿರುವ ಘಟನೆ ಸಂಭವಿಸಿದ್ದು ಯುವಕನ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ
ಆರೋಪಿ ದಯಾನಂದ ಎಂಬಾತ ತಲೆಮರೆಸಿಕೊಂಡಿದ್ದು ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಬಾಲಕಿಯನ್ನು ಇನ್ ಸ್ಟ್ರಾಗ್ರಾಂ ಮೂಲಕ ಪರಿಚಯ ಮಾಡಿಸಿಕೊಂಡ ಯುವಕ ಆಕೆಯ ಮೊಬೈಲ್ ನಂಬರ್ ಅನ್ನು ಪಡೆದುಕೊಂಡು ಆಕೆಯೊಂದಿಗೆಸಂಪರ್ಕ ಬೆಳೆಸಿ ಆಕೆಯನ್ನು ಕಳೆಂಜ ಗ್ರಾಮದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ಯುವಕ ಬಾಲಕಿಯ ಮೇಲೆ ಎರಡು ಬಾರಿ ಅತ್ಯಾಚಾರವೆಸಗಿದ್ದಾನೆ, ಬಳಿಕ ಈ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಮನ ನೊಂದ ಬಾಲಕಿ ಮನೆಯ ಸಮೀಪವಿರುವ ಬಾವಿಗೆ ಹಾರಿ ಆತ್ಮಹತ್ಯೆ ಗೆ ಯತ್ನಿಸಿದ್ದಾಳೆ.
ಮನೆಯವರು ಕೂಡಲೇ ಆಕೆಯನ್ನು ಬಾವಿಯಿಂದ ಮೇಲೆತ್ತಿ ಆಸ್ಪತ್ರೆಗೆ ದಾಖಲಿಸುವ ಕಾರ್ಯ ಮಾಡಿದ್ದಾರೆ ಅತ್ಯಾಚಾರವೆಸಗಿರುವ ವಿಚಾರ ಆಗ ಬಹಿರಂಗ ಗೊಂಡಿದ್ದು ಇದೀಗ ಬಾಲಕಿ ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಸಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka