ಬ್ಯಾನರ್ ಅಳವಡಿಸುತ್ತಿದ್ದ ವೇಳೆ ವಿದ್ಯುತ್ ಶಾಕ್: ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ
ಬೆಳ್ತಂಗಡಿ: ನಗರದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಒರ್ವ ಮೃತಪಟ್ಟು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ರಾತ್ರಿಯ ವೇಳೆ ಸಂಭವಿಸಿದೆ.
ಭಾರತೀಯ ಮಜ್ದೂರ್ ಸಂಘದ ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದ ಬ್ಯಾನರ್ ಅನ್ನು ಅಳವಡಿಸುತ್ತಿದ್ದ ವೇಳೆ ಅನಾಹುತ ಸಂಭವಿಸಿದೆ. ಖಾಸಗಿ ಪ್ರಿಂಟರ್ಸ್ ನವರು ಬ್ಯಾನರ್ ಸಿದ್ದಪಡಿಸಿ ಅಳವಡಿಸುತ್ತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ವಿದ್ಯುತ್ ಲೈನಿಗೆ ತಾಗಿದ್ದು, ಈ ವೇಳೆ ಕೆಲಸ ಮಾಡುತ್ತಿದ್ದ ಇಬ್ಬರೂ ವಿದ್ಯುದ್ದಾಘಾತಕ್ಕೆ ಈಡಾಗಿದ್ದಾರೆ.
ವಿದ್ಯುತ್ ಶಾಕ್ ನಿಂದ ಎಸೆಯಲ್ಪಟ್ಟ ಇವರಿಬ್ಬರನ್ನೂ ತಕ್ಷಣವೇ ಸ್ಥಳೀಯರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಓರ್ವ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು ಓರ್ವ ಚೇತರಿಸುತ್ತಿದ್ದಾನೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಭೇಟಿ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka