ಬೆಳ್ತಂಗಡಿ ಕ್ಷೇತ್ರದಿಂದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ ಮೂವರು ಕಾಂಗ್ರೆಸ್ ನಾಯಕರು
ಬೆಳ್ತಂಗಡಿ: 2023 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಕೆ.ಗಂಗಾಧರ ಗೌಡ, ಮಾಜಿ ಶಾಸಕ ವಸಂತ ಬಂಗೇರ ಹಾಗೂ ಯುವಕ ಮುಖಂಡ ರಕ್ಷಿತ್ ಶಿವರಾಂ ಟಿಕೆಟ್ ಗಾಗಿ ಬೆಂಗಳೂರಿಗೆ ತೆರಳಿ ಅರ್ಜಿ ಸಲ್ಲಿಸಿರುವುದಾಗಿ ತಿಳಿದು ಬಂದಿದೆ.
ಅರ್ಜಿ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿತ್ತು. ರಕ್ಷಿತ್ ಅವರು ಸೋಮವಾರ ಅರ್ಜಿ ಸಲ್ಲಿಸಿದ್ದರೆ, ಗಂಗಾಧರ ಗೌಡ ಮತ್ತು ವಸಂತ ಬಂಗೇರ ಅವರು ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ. ಇವರೊಂದಿಗೆ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳ್ತಂಗಡಿ ಕ್ಷೇತ್ರದಿಂದ ಸ್ಪರ್ಧಿಸಲು ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ, ಅನುಭವಿ ರಾಜಕಾರಣಿಗಳಿಗಾ ಅಥವಾ ಹೊಸ ಮುಖಕ್ಕೆ ಆದ್ಯತೆ ನೀಡಲಿದೆಯಾ ಎಂಬುದನ್ನು ಕಾದು ನೋಡಬೇಕಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka