ಬಿಜೆಪಿ ಕಚೇರಿಯಲ್ಲೇ ಬಿಜೆಪಿ ನಾಯಕ ಶವವಾಗಿ ಪತ್ತೆ: ಮಹಿಳೆಯ ಬಂಧನ
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತ ಪೃಥ್ವಿರಾಜ್ ನಾಸ್ಕರ್ ಜಿಲ್ಲೆಯ ಪಕ್ಷದ ಸಾಮಾಜಿಕ ಮಾಧ್ಯಮ ಖಾತೆಯನ್ನು ನಿರ್ವಹಿಸುತ್ತಿದ್ದರು.
ಬಿಜೆಪಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಹೊಣೆಯಾಗಿಸಿದ್ರೆ, ಹತ್ಯೆಗೆ ಸಂಬಂಧಿಸಿದಂತೆ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೊಲೆಗೆ ಕಾರಣ ವೈಯಕ್ತಿಕವಾಗಿರಬಹುದು ಎಂದು ಶಂಕಿಸಲಾಗಿದೆ.
ಮೃತ ನಸ್ಕರ್ ಅವರ ರಕ್ತಸಿಕ್ತ ದೇಹವು ರಾತ್ರಿ ಪಕ್ಷದ ಕಚೇರಿಯಲ್ಲಿ ಪತ್ತೆಯಾಗಿದೆ. ನವೆಂಬರ್ ೫ ರಿಂದ ಅವರು ಕಾಣೆಯಾಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು ಹರಿತವಾದ ಆಯುಧಗಳಿಂದ ಹೊಡೆದು ಕೊಂದಿದ್ದೇನೆ ಎಂದು ಬಂಧಿತ ಮಹಿಳೆ ಒಪ್ಪಿಕೊಂಡಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಂಧಿತ ಮಹಿಳೆ ಜತೆ ಮೃತನ ಸಂಬಂಧ ಮತ್ತು ಯಾವುದೇ ಜಗಳದಲ್ಲಿ ಭಾಗಿಯಾಗಿರುವ ವ್ಯಕ್ತಿಯ ಕೋನವನ್ನು ನಾವು ಅನ್ವೇಷಿಸುತ್ತಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj