ಮಹಾಕುಂಭಮೇಳದಲ್ಲಿ ಮಹಿಳೆಯರ ಸ್ನಾನದ ವಿಡಿಯೋ ಶೇರ್ ಮಾಡಿದ ಪ್ರಕರಣ: ವ್ಯಕ್ತಿಯ ಬಂಧನ

ಮಹಾಕುಂಭ ಮೇಳದ ಸಂದರ್ಭದಲ್ಲಿ ಮಹಿಳೆಯರು ಸ್ನಾನ ಮಾಡುವ ಮತ್ತು ಬಟ್ಟೆ ಬದಲಾಯಿಸುವ ವೀಡಿಯೊಗಳನ್ನು ರೆಕಾರ್ಡ್ ಮಾಡಿ ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ ಆರೋಪದ ಮೇಲೆ ಪ್ರಯಾಗ್ರಾಜ್ ನ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಿನ ಫಾಲೋವರ್ಸನ್ನು ಪಡೆಯಲು ಮತ್ತು ಯೂಟ್ಯೂಬ್ ನಲ್ಲಿ ಹಣಗಳಿಸಲು ವೀಡಿಯೊಗಳನ್ನು ಚಿತ್ರೀಕರಿಸಿದ್ದೇನೆ ಎಂದು ವಿಚಾರಣೆಯ ಸಮಯದಲ್ಲಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಯನ್ನು ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ನಿವಾಸಿ ಅಮಿತ್ ಕುಮಾರ್ ಝಾ ಎಂದು ಗುರುತಿಸಲಾಗಿದೆ. ಬಿಎನ್ಎಸ್‌ನ ಸೆಕ್ಷನ್ 296/79 ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj