ಬೆಂಗಳೂರಿನಲ್ಲಿ ಎರಡು ಬಾರಿ ಭೂಕಂಪನದ ಅನುಭವ: ಮಂಡ್ಯದಲ್ಲಿ ಕೇಳಿ ಬಂತು ನಿಗೂಢ ಶಬ್ಧ!
ಬೆಂಗಳೂರು: ಬೆಂಗಳೂರಿನ ಹಲವೆಡೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ ಮೈಸೂರು ರಸ್ತೆ ಮೊದಲಾದೆಡೆಗಳಲ್ಲಿ ಭೂಮಿ ಕಂಪಿಸಿದಂತಾಗಿದೆ ಎಂದು ಇಲ್ಲಿನ ಜನರು ಆತಂಕ ತೋಡಿಕೊಂಡಿದ್ದಾರೆ.
ವರದಿಗಳ ಪ್ರಕಾರ, ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ ಎನ್ನಲಾಗಿದೆ. ಮೊದಲ ಬಾರಿ ಲಘೂ ಭೂಕಂಪದ ಅನುಭವಾಗಿದ್ದರೆ, ಎರಡನೆ ಬಾರಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ ಎನ್ನಲಾಗಿದೆ.
ಮಂಡ್ಯದಲ್ಲಿ ಭಾರೀ ನಿಗೂಢ ಶಬ್ಧ:
ಮಂಡ್ಯದ ಕೆಆರ್ ಎಸ್, ಪಾಂಡವಪುರ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಭಾರೀ ಶಬ್ಧವೊಂದು ಕೇಳಿಸಿದ್ದು, ಈ ಶಬ್ಧಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. 10ರಿಂದ 15 ನಿಮಿಷದ ಅಂತರದಲ್ಲಿ 2 ಬಾರಿ ಶಬ್ಧ ಕೇಳಿ ಬಂದಿದೆ ಎನ್ನಲಾಗಿದೆ. ಕೆಲ ಕಾಲ ಭೂಕಂಪನದ ಅನುಭವವಾಗಿದೆ ಎನ್ನಲಾಗುತ್ತಿದ್ದು, ಕಚೇರಿ, ಮನೆ, ಕಟ್ಟಡಗಳ ಕಿಟಕಿಗಳು, ವಸ್ತುಗಳು ನಡುಗಿವೆ ಎಂದು ಹೇಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವರದಕ್ಷಿಣೆ ನೀಡಲು ಕೂಡಿಟ್ಟಿದ್ದ 75 ಲಕ್ಷ ರೂ. ಹಣವನ್ನು ಹಾಸ್ಟೆಲ್ ನಿರ್ಮಾಣಕ್ಕೆ ದಾನ ಮಾಡಿದ ಯುವತಿ!
ಮಹಿಳಾ ಸಿಬ್ಬಂದಿಗಳೊಂದಿಗೆ ಆರೋಗ್ಯಾಧಿಕಾರಿ ಚೆಲ್ಲಾಟ: ವಿಡಿಯೋ ವೈರಲ್
ತೀವ್ರ ಎದೆ ನೋವಿನ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಅಣ್ಣಾ ಹಜಾರೆ
ಪರೀಕ್ಷೆ ಬರೆಯಲು ತೆರಳಿದ್ದ ಯುವತಿಯ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ!