ಬೆಂಗಳೂರು: ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟ: ಐವರಿಗೆ ಗಂಭೀರ ಗಾಯ

ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತುವೊಂದು ಸ್ಪೋಟಗೊಂಡಿದ್ದು, ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿರುವ ಘಟನೆ ನಡೆದಿದೆ.
ಸ್ಫೋಟದ ತೀವ್ರತೆಗೆ ಐವರಿಗೆ ಗಂಭೀರ ಗಾಯಗಳಾಗಿದ್ದು, ಕೆಫೆಗೆ ಹಾನಿಯಾಗಿದೆ. ಗಾಯಾಳುಗಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ನಿಗೂಢ ವಸ್ತು ಸ್ಫೋಟದಿಂದ ಭಾರೀ ಶಬ್ದವಾಗಿದ್ದು, ಸ್ಥಳೀಯರು ಈ ಭಾರೀ ಶಬ್ದಕ್ಕೆ ಬೆಚ್ಚಿಬಿದ್ದಿದ್ದಾರೆ. ಸ್ಫೋಟದ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಸಿಲಿಂಡರ್ ಅಥವಾ ಬಾಯ್ಲರ್ ಸ್ಫೋಟ ಕೂಡ ಆಗಿರಬಹುದೆಂದು ಎಂದು ಶಂಕಿಸಲಾಗಿತ್ತು. ಆದ್ರೆ, ಸ್ಫೋಟದಲ್ಲಿ ಕೆಲ ಐಡಿ ಕಾರ್ಡ್ಗಳು ದೊರೆತಿವೆ. ಇನ್ನು ಬ್ಲಾಸ್ಟ್ ನಡೆದ ಸ್ಥಳದ ಸಮೀಪದಲ್ಲೇ ಒಂದು ಬ್ಯಾಟರಿ ಪತ್ತೆಯಾಗಿದೆ. ಅಲ್ಲದೇ ಹೋಟೆಲ್ಗೆ ಗ್ರಾಹಕರೊಬ್ಬರ ಬ್ಯಾಗ್ ಸುಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ ಎಂದು ವರದಿಯಾಗಿದೆ.
ಘಟನೆಗೆ ಸ್ಪಷ್ಟ ಕಾರಣಗಳೇನು ಎನ್ನುವ ಸ್ಪಷ್ಟ ಮಾಹಿತಿ ಪೊಲೀಸರ ತನಿಖೆಯ ಬಳಿಕ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಎಸಿಪಿ ರೀನಾ ಸುವರ್ಣ ಮತ್ತು ಮಾರತ್ತಹಳ್ಳಿ ಪೊಲೀಸರು ಭೇಟಿ ನೀಡಿ ಪರಿಸ್ಥಿತಿಯನ್ನು ನಿಭಾಯಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth