ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಕಾರ್ಮಿಕರು ಸಾವು
ಬೆಂಗಳೂರು: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇದೇ ಸಂದರ್ಭದಲ್ಲಿ ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಅವಶೇಷಗಳಡಿಯಲ್ಲಿ ಹಲವು ಕಾರ್ಮಿಕರು ಸಿಲುಕಿದ್ದು ಅವರ ರಕ್ಷಣಾ ಕಾರ್ಯ ಮುಂದುವರಿದಿದೆ. ವರದಿಗಳ ಪ್ರಕಾರ ಕಟ್ಟಡ ಕುಸಿಯುತ್ತಿದ್ದಂತೆಯೇ ಅವಶೇಷಗಳಡಿಯಲ್ಲಿ ಸಿಲುಕಿದ್ದ ಕಾರ್ಮಿಕನೋರ್ವ ರಕ್ತ ಸಿಕ್ತ ಸ್ಥಿತಿಯಲ್ಲಿ ಆಚೆ ಬಂದಿದ್ದು, ಕಾರ್ಮಿಕನ ತಲೆಗೆ ಪೆಟ್ಟಾಗಿ ರಕ್ತ ಸೋರುತ್ತಿದೆ. ಇನ್ನು ರಕ್ತದ ಮಡುವಿನಲ್ಲೇ ಅಳುತ್ತ ನಮ್ಮವರು ಒಳಗೆ ಸಿಲುಕಿದ್ದಾರೆಂದು ಎಂದು ಮಾಹಿತಿ ನೀಡಿದ್ದಾನೆ.
ಒಳಗೆ ಇನ್ನು ಕಾರ್ಮಿಕರು ಇದ್ದಾರೆ ಎನ್ನುವುದು ಖಚಿತವಾಗುತ್ತಿದ್ದಂತೆಯೇ ರಕ್ಷಣಾ ಕಾರ್ಯಚರಣೆ ಚುರುಕುಗೊಂಡಿದೆ.
ಇನ್ನೂ ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಮೂವರ ಕಾರ್ಮಿಕ ಶವ ಪತ್ತೆಯಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಡಿಸಿಪಿ ದೇವರಾಜ್ ಅವರಿಗೆ ಫೋನ್ ಮಾಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು.
ಮಳೆಯ ನಡುವೆಯೂ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನು ಸ್ಥಳಕ್ಕೆ ಸ್ಥಳೀಯ ಶಾಸಕ ಬೈರತಿ ಸುರೇಶ್ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: