ಮಂಗಳೂರು: ಬೆಂಕಿ ಹತ್ತಿಕೊಂಡು ಸುಟ್ಟು ಭಸ್ಮವಾದ ಮನೆ

ಮಂಗಳೂರು ನಗರ ಹೊರವಲಯದ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಹಂಚಿನ ಮನೆಯು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ರಾತ್ರಿ ಸಂಭವಿಸಿದೆ.
ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ರಂಝಾನ್ ಉಪವಾಸದ ಪ್ರಯುಕ್ತ ಇಫ್ತಾರ್ ನಲ್ಲಿ ನಿರತವಾಗಿದ್ದ ಮನೆಯವರ ಸಮಯ ಪ್ರಜ್ಞೆಯಿಂದ ಪ್ರಾಣ ಹಾನಿಯಾಗಿಲ್ಲ. ಆದರೆ ಮನೆಯು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.
ಮನೆಯ ಪೀಠೋಪಕರಣಗಳು, ಪಾತ್ರೆಗಳು, ವಿದ್ಯುತ್ ಉಪಕರಣಗಳು, ಗೃಹ ಉಪಯೋಗಿ ಪರಿಕರಗಳು, ಮಕ್ಕಳ ಶಾಲಾ ಪಠ್ಯ ಪುಸ್ತಕ ಇನ್ನಿತರ ವಸ್ತುಗಳು ಸಂಪೂರ್ಣ ಭಸ್ಮಗೊಂಡಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದು ಶಾಸಕ ಯು.ಟಿ.ಖಾದರ್ ಭೇಟಿ ನೀಡಿ ಪರಿಶೀಲಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw