ಪತಿಯನ್ನು ಬೆದರಿಸಲು ಬೆಂಕಿ ಹಚ್ಚಿಕೊಂಡ ಗರ್ಭಿಣಿ: ಮಗು ಹೊಟ್ಟೆಯಲ್ಲೇ ಸಾವು, ಮಹಿಳೆಯ ಸ್ಥಿತಿ ಗಂಭೀರ

ಕೊಚ್ಚಿ: ಪತಿಯನ್ನು ಹೆದರಿಸಲು ಗರ್ಭಿಣಿಯೊಬ್ಬಳು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಚ್ಚಿಯಲ್ಲಿ ನಡೆದಿದ್ದು, ಇದೀಗ ಮಹಿಳೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ.
ಅರುಣಿಮಾ(27) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯಾಗಿದ್ದಾರೆ. ಇವರ ಪತಿ ಅಜಯ್ ಪ್ರಕಾಶ್ ಯೋಧ ಆಗಿದ್ದು, ಸೇನೆಯಿಂದ ರಜೆಯ ಮೇಲೆ ಊರಿಗೆ ಆಗಮಿಸಿದ್ದಾರೆ. ಈ ವೇಳೆ ಪತಿಗೆ ಬೆದರಿಕೆ ಹಾಕಲು ಪತ್ನಿ ಈ ಕೃತ್ಯ ನಡೆಸಿದ್ದು, ಆದರೆ ಆಕೆಗೆ ಗಂಭೀರ ಗಾಯವಾಗಿದ್ದು, ಹೊಟ್ಟೆಯೊಳಗೆ ಮೃತಪಟ್ಟಿದೆ. ಇದೀಗ ಮಗುವನ್ನು ಹೊಟ್ಟೆಯಿಂದ ಹೊರ ತೆಗೆಯಲು ವೈದ್ಯರು ಸತತ ಪ್ರಯತ್ನ ನಡೆಸುತ್ತಿದ್ದಾರೆ.
ಹೊಟ್ಟೆಯಲ್ಲಿ ಮೃತಪಟ್ಟ ಮಗುವನ್ನು ಹೊರ ತೆಗೆಯಲು ಸತತ ಮೂರು ದಿನಗಳಿಂದ ವೈದ್ಯರು ಯತ್ನಿಸುತ್ತಿದ್ದಾರೆ. ತೀವ್ರ ಸುಟ್ಟ ಗಾಯಗಳಿರುವ ಕಾರಣ ಶ್ರಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆಯುವುದು ವೈದ್ಯರಿಗೆ ಸವಾಲಿನ ಕೆಲಸವಾಗಿದೆ.
ಗಂಭೀರ ಸುಟ್ಟ ಗಾಯಗಳೊಂದಿಗೆ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಸೇರಿಸಿದ ಪತಿ ಆರಂಭದಲ್ಲಿ ಗ್ಯಾಸ್ ಸ್ಫೋಟದಿಂದ ಆಕೆ ಗಾಯಗೊಂಡಿದ್ದಾಳೆ ಎಂದು ಹೇಳಿದ್ದು, ಆದರೆ, ಸೀಮೆ ಎಣ್ಣೆ ವಾಸನೆಯಿಂದಾಗಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿರುವುದು ಗೊತ್ತಾಗಿದೆ. ಸದ್ಯ ಮಹಿಳೆಯ ಪ್ರಾಣ ಉಳಿಸುವ ಕಡೆಗೆ ಹೆಚ್ಚಿನ ಗಮನ ನೀಡಲಾಗಿದ್ದು, ಬಳಿಕ ಪ್ರಕರಣದ ಕುರಿತು ಸ್ಪಷ್ಟ ಮಾಹಿತಿಗಳು ಲಭ್ಯವಾಗಬೇಕಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw