ಪಟಾಕಿಯ ಕಿಡಿ ಸೋಕಿ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ದೇವರ ರಥ!
ಬೆಳಗಾವಿ: ಪಟಾಕಿ ಸಿಡಿದ ಪರಿಣಾಮ ದೇವರ ರಥಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದಲ್ಲಿ ನಡೆದಿದ್ದು, ಕೆಲ ಕಾಲ ಭಕ್ತರು ಆತಂಕಕ್ಕೀಡಾದ ಘಟನೆ ನಡೆಯಿತು.
ಶಿವಪೇಟೆಯಲ್ಲಿ ನಿನ್ನೆ ಶ್ರೀ ಜಡಿ ಶಂಕರಲಿಂಗ ದೇವರ 38ನೇ ವರ್ಷದ ಮಹಾರಥೋತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸ್ಥಳದಲ್ಲಿ ಕೆಲ ಭಕ್ತರು ಪಟಾಕಿ ಸಿಡಿಸಿದ್ದಾರೆ. ಪಟಾಕಿ ಕಿಡಿ ರಥದ ಮೇಲ್ಭಾಗಕ್ಕೆ ತಾಕಿದ್ದು, ಪರಿಣಾಮವಾಗಿ ರಥಕ್ಕೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ.
ಬೆಂಕಿ ಹತ್ತಿಕೊಂಡ ಪರಿಣಾಮ ರಥ ಹೊತ್ತಿ ಉರಿಯಲು ಆರಂಭಿಸಿದ್ದು, ಈ ವೇಳೆ ತಕ್ಷಣವೇ ಕಾರ್ಯಪ್ರವೃತ್ತರಾದ ಗ್ರಾಮಸ್ಥರು ಬೆಂಕಿಯನ್ನು ಹರಸಾಹಸಪಟ್ಟು ನಂದಿಸಿದ್ದು, ಹೆಚ್ಚಿನ ಹಾನಿಯನ್ನು ತಪ್ಪಿಸಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿಜೆಪಿಗೆ ವೋಟು ಹಾಕಿದರೆ 50 ರೂಪಾಯಿಗೆ ಮದ್ಯ ಕೊಡುತ್ತೇವೆ | ಬಿಜೆಪಿ ನಾಯಕ ಹೇಳಿಕೆ
ಸಾರ್ವಜನಿಕರೆದುರೇ ಮಹಿಳೆಯನ್ನು ಕೊಚ್ಚಿ ಕೊಂದ ಮೂರನೇ ಪತಿ ಸಹಿತ ಇಬ್ಬರು ಅರೆಸ್ಟ್!
ಮನುಷ್ಯರನ್ನೇ ಹೋಲುವ ಮರಿಗೆ ಜನ್ಮ ನೀಡಿದ ಮೇಕೆ!
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿರುವ ಈ ದೇವಿ ಯಾರು?
ಜನರಿಗೊಂದು ನ್ಯಾಯ, ನಾಯಕರಿಗೊಂದು ನ್ಯಾಯ: ಬಿಜೆಪಿ ಕಾರ್ಯಕರಣಿ ಸಭೆಯಲ್ಲಿ ಮಾಸ್ಕ್ ಧರಿಸದೇ ನಿರ್ಲಕ್ಷ್ಯ