ರಾಜ್ಯದ ಜನತೆಗೆ ಬಿಗ್ ಶಾಕ್: ಬೇಸಿಗೆಗೆ ಮುನ್ನವೇ ಏರಿಕೆಯಾಗಲಿದೆಯೇ ವಿದ್ಯುತ್ ಬೆಲೆ?
ಬೆಂಗಳೂರು: ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಗ್ರಾಹಕ ತತ್ತರಿಸಿ ಹೋಗಿದ್ದು, ಇದೀಗ ಬೇಸಿಗೆಗೂ ಮೊದಲೇ ವಿದ್ಯುತ್ ದರದಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದ್ದು, ಯುನಿಟ್ ಗೆ 1 ರೂ. 50 ಪೈಸೆ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಬೆಸ್ಕಾಂ ಅಧಿಕಾರಿಗಳು ಸಲ್ಲಿರುವ ಪ್ರಸ್ತಾವಣೆಯ ಪ್ರಕಾರ ಶೀಘ್ರದಲ್ಲಿಯೇ ವಿದ್ಯುತ್ ದರ ಕೂಡ ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ. ವಿದ್ಯುತ್ ಸರಬರಾಜು ಕಂಪೆನಿಗಳಾದ ಬೆಸ್ಕಾಂ, ಮೆಕ್ಕಾಂ, ಚೆಕ್ಕಾಂ ಸೇರಿದಂತೆ ಇತರ ಕಂಪೆನಿಗಳು ಈ ವರ್ಷವೂ ವಿದ್ಯುತ್ ದರ ಏರಿಕೆಯ ಪ್ರಸ್ತಾವಣೆ ಸಲ್ಲಿಸಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಕಂಪೆನಿಗಳು ಪ್ರಸ್ತಾವನೆ ಸಲ್ಲಿಸಿದ್ದು, ನಷ್ಟದ ಕಾರಣ ನೀಡಿ ಕಂಪೆನಿಗಳು ಬೆಲೆ ಏರಿಕೆಯನ್ನು ಪ್ರಸ್ತಾಪಿಸಿವೆ. ಈ ಹಿಂದಿನ ವರ್ಷಗಳಲ್ಲಿ ಕೂಡ ವಿದ್ಯುತ್ ಬೆಲೆ ಏರಿಕೆಯಾಗಿತ್ತು.
2009 ರಲ್ಲಿ ಪ್ರತಿ ಯೂನಿಟ್ ಗೆ 34 ಪೈಸೆ ಹೆಚ್ಚಳವಾಗಿತ್ತು. 2010 ರಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ ಹೆಚ್ಚಳ, 2011 ರಲ್ಲಿ ಪ್ರತಿ ಯೂನಿಟ್ ಗೆ 28 ಪೈಸೆ ಹೆಚ್ಚಳ, 2012 ರಲ್ಲಿ ಪ್ರತಿ ಯೂನಿಟ್ ಗೆ 13 ಪೈಸೆ ಹೆಚ್ಚಳ, 2013 ರಲ್ಲಿ ಪ್ರತಿ ಯೂನಿಟ್ 13 ಪೈಸೆ ಹೆಚ್ಚಳ, 2017 ರಲ್ಲಿ ಪ್ರತಿ ಯೂನಿಟ್ 48 ಪೈಸೆ ಹೆಚ್ಚಳ, 2019 ರಲ್ಲಿ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ, 2020 ರಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ ಹೆಚ್ಚಳವಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೊಟ್ಟೆ ಕೊಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯಕೊಟ್ಟಂತಾಗುತ್ತದೆ | ಪೇಜಾವರ ಶ್ರೀ
ಎರಡು ಲಾರಿ, ಒಂದು ಕಾರಿನ ನಡುವೆ ಸರಣಿ ಅಪಘಾತ!
ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು, ಹಿಂದೂ-ಮುಸ್ಲಿಂ ಅಂತ ಅಲ್ಲ | ಸಿದ್ದರಾಮಯ್ಯ
ಸೆಕ್ಯೂರಿಟಿ ಗಾರ್ಡೇ ‘ಕಳ್ಳರ ಗುರು’: ಫ್ಲ್ಯಾಟ್ ಗಳಿಂದ ಕಳ್ಳತನವಾಗಿದ್ದೆಷ್ಟು ಗೊತ್ತಾ?
ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಇದೆಯಾ? | ಕೊವಿಡ್ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡ ಕ್ರಮಗಳೇನು?
ಗುಡ್ ನ್ಯೂಸ್: ಹೆಲಿಕಾಫ್ಟರ್ ಪತನದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚೇತರಿಸಿಕೊಳ್ಳುತ್ತಿದ್ದಾರೆ