ಶೇಖ್ ಆದಂ ಸಾಹೇಬ್ ,  ರಾಮಕೃಷ್ಣ ಭಟ್ ಅನಿತಾ ಕೌಲ್ ರಾಜ್ಯ ಮಟ್ಟದ ಉತ್ತಮ ಶಿಕ್ಷಕ  ಪ್ರಶಸ್ತಿ ಪುರಸ್ಕೃತರು

shik adam ramakrishna bhat
18/01/2023

ಶೇಖ್ ಆದಂ ಸಾಹೇಬ್ ನೆಲ್ಯಾಡಿ

ಶಿಕ್ಷಕ, ಸಂಘಟಕ, ಕ್ರಿಯಾಶೀಲ ಬೋಧಕರಾಗಿರುವ ಶೇಖ್ ಆದಂ ಸಾಹೇಬ್ ರವರು 2022ನೇ ಸಾಲಿನ, ಕರ್ನಾಟಕ ರಾಜ್ಯ ಜ್ಞಾನ ವಿಜ್ಞಾನ ಸಮಿತಿಯವರು ಕೊಡಮಾಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದವರು.

ಕಡಬ ತಾಲೂಕಿನ ನೆಲ್ಯಾಡಿಯ ಕೌಕ್ರಾಡಿ ಗ್ರಾಮದವರಾದ  ಇವರು ಪ್ರಸ್ತುತ ಬಂಟ್ವಾಳ ತಾಲೂಕಿನ ಕಾವಳಪಡೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ. ದಿನಾಂಕ 22 ಫೆಬ್ರವರಿ 2023 ರಂದು ಬೆಂಗಳೂರಿನಲ್ಲಿ ಆಯೋಜನೆಗೊಂಡಿರುವ ಸಮಾರಂಭದಲ್ಲಿ ಇವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ರಾಮಕೃಷ್ಣ ಭಟ್ ಚೊಕ್ಕಾಡಿ

ಬೆಳ್ತಂಗಡಿ ತಾಲೂಕಿನ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ಸಲ್ಲಿಸುತ್ತಿರುವ ಇವರು, ಕರ್ನಾಟಕ ರಾಜ್ಯ ಜ್ಞಾನ ವಿಜ್ಞಾನ ಸಮಿತಿಯವರು ಕೊಡಮಾಡುವ 2022ನೇ ಸಾಲಿನ, ರಾಜ್ಯ ಮಟ್ಟದ, ಅನಿತಾ ಕೌಲ್ ಉತ್ತಮ ಶಿಕ್ಷಕ ಪುರಸ್ಕೃತರು.

ಸಾಹಿತಿ, ಬರಹಗಾರ, ಉತ್ತಮ ಸಂಘಟಕರೂ ಆಗಿರುವ ಇವರು ಬೋಧನೆಯೊಂದಿಗೆ ತನ್ನ ಶಾಲೆಯಲ್ಲಿ ಕಲಾ ಗ್ಯಾಲರಿಯೊಂದಿಗೆ, ಜಲ ಮರುಪೂರಣದಂತಹ ವಿಶೇಷ ಪ್ರಯೋಗಗಳನ್ನು ನಡೆಸಿದವರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈರ್ವರು ಅನಿತಾ ಕೌಲ್ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಲ್ಲಿ ಓರ್ವರು ಇವರಾಗಿದ್ದಾರೆ.

ದಿನಾಂಕ 22 ಫೆಬ್ರವರಿ 2023ರಂದು ಬೆಂಗಳೂರಿನಲ್ಲಿ ಆಯೋಜನೆಗೊಂಡಿರುವ ಸಮಾರಂಭದಲ್ಲಿ ಇವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version