ಪತ್ನಿಯ ಜೊತೆಗಿದ್ದ ವ್ಯಕ್ತಿಯನ್ನು ಕರೆದು ಥಳಿಸಿ, ಬೆತ್ತಲೆ ಮೆರವಣಿಗೆ ಮಾಡಿದ ಪತಿ | 8 ಜನರ ಬಂಧನ
ಕೋಟಾ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿ, ಚಪ್ಪಳಿ ಹಾರ ಹಾಕಿ ಮೆರವಣಿಗೆ ನಡೆಸಿದ ಘಟನೆ ನಡೆದಿದ್ದು, ಈ ಸಂಬಂಧ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿತನನ್ನೂ ಬಂಧಿಸಲಾಗಿದೆ.
ರಾಜಸ್ಥಾನದ ಝಲಾವರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿರುವ ರಾಕೇಶ್ ರಾಥೋಡ್, ತನಗೆ ಹಲ್ಲೆ ನಡೆಸಿ, ಬೆತ್ತಲೆ ಮೆರವಣಿಗೆ ನಡೆಸಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದ, ಈ ದೂರಿನನ್ವಯ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ರಾಕೇಶ್ ನನ್ನೂ ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಸಂಜೆ ರಾಕೇಶ್ ರಾಥೋಡ್ ಮಹಿಳೆಯೊಬ್ಬರ ಜೊತೆಗಿದ್ದು, ಇದನ್ನು ಮಹಿಳೆಯ ಪತಿ ಸ್ನೇಹಿತರು ನೋಡಿದ್ದರು. ಅವರು ಪತಿ ತಿಳಿಸಿದ್ದಾರೆ. ಇದಾದ ಬಳಿಕ ರಾಥೋಡ್ ಗೆ ಕರೆ ಮಾಡಿ ಕರೆದು ಥಳಿಸಿ, ಬೆತ್ತಲೆ ಮೆರವಣಿಗೆ ಬಘೇರ್ ಗ್ರಾಮದಲ್ಲಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ 8 ಜನರನ್ನು ಸೋಮವಾರ ಬಂಧಿಸಲಾಗಿದೆ. ಮಹಿಳೆಯ ಪತಿ ತಲೆಮರೆಸಿಕೊಂಡಿದ್ದಾನೆ.