ಕೇಂದ್ರ ಸಚಿವ ಭಗವಂತ ಖೂಬಾ ವಾಹನದ ಮೇಲೆ ಕಲ್ಲು ತೂರಾಟ - Mahanayaka

ಕೇಂದ್ರ ಸಚಿವ ಭಗವಂತ ಖೂಬಾ ವಾಹನದ ಮೇಲೆ ಕಲ್ಲು ತೂರಾಟ

bagavantha kuba
02/03/2022

ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಮಾಡಿ ಹೊರ ಬರುತ್ತಿರುವ ಸಂದರ್ಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಮೇಲೆ ಅಲ್ಪಸಂಖ್ಯಾತ ಸಮುದಾಯದವರು ಕಲ್ಲು ತೂರಾಟ ನಡೆಸಿರುವ ಘಟನೆ ಬಗ್ಗೆ ವರದಿಯಾಗಿದೆ.

ಜಿಲ್ಲಾಡಳಿತದ ನಿರ್ದೇಶನದಂತೆ ಶಿವಲಿಂಗ ಪೂಜೆ ಸಲ್ಲಿಸಲು 10 ಜನರಿಗೆ ಅವಕಾಶ ನೀಡಲಾಗಿತ್ತು. ಹಾಗೇ ಪೂಜೆ ಸಲ್ಲಿಸಲೆಂದು ಭಗವಂತ ಖೂಬಾ, ಶಾಸಕ ರಾಜಕುಮಾರ್ ಪಾಟೀಲ್, ಬಸವರಾಜ ಮತ್ತಿಮಡು, ಕಡಗಂಚಿ ಮಠದ ವೀರಭದ್ರ ಸ್ವಾಮೀಜಿ ಸೇರಿದಂತೆ ಹತ್ತು ಜನರ ತಂಡವು ದರ್ಗಾ ಪ್ರವೇಶ ಮಾಡಿತ್ತು. ಪೂಜೆ ಸಲ್ಲಿಸಿ ಹೊರ ಬರುತ್ತಿರುವ ಸಂದರ್ಭದಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನರು ಕಲ್ಲು ತೂರಾಟ ಮಾಡಿದ್ದಾರೆ ಎನ್ನಲಾಗಿದೆ.

ಕೇಂದ್ರ ಸಚಿವರ ಕಾರ್, ಸ್ಥಳದಲ್ಲಿದ್ದ ಪೊಲೀಸ್, ಮಾಧ್ಯಮದರ ಮೇಲೆ ಕಲ್ಲು ತೂರಾಟವಾಗಿದ್ದು, ವಿದ್ಯುನ್ಮಾನ ಮಾಧ್ಯಮದ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ಪಟ್ಟರು, ಅನ್ಯ ಕೋಮಿನ ಜನರು ಕಲ್ಲು ಮತ್ತು ಬಡಿಗೆಗಳಿಂದ ವಾಹನಗಳ ಮೇಲೆ ಹಲ್ಲೆ ಮಾಡಿದ್ದಾರೆ. ಪರಿಣಾಮ ಸಚಿವರ ಕಾರು ಸೇರಿದಂತೆ ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ ಅವರ ವಾಹನದ ಮೇಲೂ ಕಲ್ಲು ತೂರಾಟವಾಗಿದ್ದು, ಹಿಂಬದಿಯ ಸೈಡ್ ಗಾಜು ಪುಡಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…




ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಎರಡೂವರೆ ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ಅಪರಾಧಿಗೆ ಮರಣದಂಡನೆ

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆ

ಸಿಬಿಐ ಅಧಿಕಾರಿಗಳು ಎಂದು ಹೇಳಿ ಲಕ್ಷಾಂತರ ರೂ. ನಗದು, ಚಿನ್ನಾಭರಣ ದರೋಡೆ

ಕೆಂಪುಕೋಟೆ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ದ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ

ಉಕ್ರೇನ್ ಮೇಲೆ ರಷ್ಯಾ ವೈಮಾನಿಕ ದಾಳಿ: ಕರ್ನಾಟಕ ಮೂಲದ ವಿದ್ಯಾರ್ಥಿಯ ಸಾವು

ಇತ್ತೀಚಿನ ಸುದ್ದಿ