ಭಾರೀ ಮಳೆಗೆ ತತ್ತರಿಸಿದ ತಮಿಳುನಾಡು | ನದಿಗಳಾದ ರಸ್ತೆ

tamilnadu
08/11/2021

ಚೆನ್ನೈ: ಭಾರೀ ಮಳೆಗೆ ತಮಿಳುನಾಡು ತತ್ತರಿಸಿದ್ದು, ಮಾಹಿತಿಗಳ ಪ್ರಕಾರ ನವೆಂಬರ್ 11ರವರೆಗೆ ಮಳೆಯಾರ್ಭಟ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಭಾರೀ ಮಳೆಯ ಪರಿಣಾಮ ತಮಿಳುನಾಡಿನಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ರಸ್ತೆಗಳಲ್ಲಿ ನದಿಯಂತೆ ನೀರು ಹರಿಯುತ್ತಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡಿನ ವಿವಿಧ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನೊಂದೆಡೆ ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕವನ್ನು ಸೃಷ್ಟಿಸಿದೆ.

6 ವರ್ಷಗಳ ಬಳಿಕ ತಮಿಳುನಾಡಿನಲ್ಲಿ ಇಂತದ್ದೊಂದು ಭೀಕರ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಶನಿವಾರ ರಾತ್ರಿ ತಮಿಳುನಾಡಿನಲ್ಲಿ 23 ಸೆಂಟಿ ಮೀಟರ್ ಮಳೆಯಾಗಿದೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version