ಪ್ರತಿಭಟನೆ ಹೆಸರಲ್ಲಿ ಜನರಿಗೆ ತೊಂದರೆ ಕೊಡುವುದು ಬೇಡ | ಭಾರತ್ ಬಂದ್ ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
ಬೆಳಗಾವಿ: ಕೇಂದ್ರದ ಕೃಷಿ ಕಾಯ್ದೆ ಜಾರಿ ವಿರೋಧಿಸಿ ರೈತ ಸಂಘಟನೆಗಳ ನೇತೃತ್ವದಲ್ಲಿ ಸೆ.27ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿಭಟನೆ ಹೆಸರಲ್ಲಿ ಜನರಿಗೆ ತೊಂದರೆ ಕೊಡುವುದು ಬೇಡ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ರೈತ ಮುಖಂಡರ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಈಗಷ್ಟೇ ಆರ್ಥಿಕ ಚಟುವಟಿಕೆಗಳು ಆರಂಭವಾಗಿದೆ. ಕೋವಿಡ್ ನಿಂದ ಜನರು, ರೈತರು ಸಮಸ್ಯೆ ಅನುಭವಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಮತ್ತೆ ಬಂದ್ ನಡೆಸಿ ತೊಂದರೆ ಕೊಡುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
2019-20ರಲ್ಲಿ ಪ್ರವಾಹದಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿವೆ. ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ಕೆಲಸ ಮಾಡುತ್ತಿದೆ. ಈಗಾಗಲೇ ಪರಿಹಾರ ಕಾರ್ಯ ಆರಂಭವಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ 44,205 ಮನೆಗಳಿಗೆ ಪರಿಹಾರ ನೀಡಲಾಗಿದೆ ಎಂದು ಅವರು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ತೂಕವನ್ನು ಇಳಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಇವುಗಳನ್ನು ಸೇರಿಸಿ!
‘ತಾಲಿಬಾನಿ ಬಿಜೆಪಿ’ ಭಾರತವನ್ನು ಆಳಲು ಸಾಧ್ಯವಿಲ್ಲ | ಮಮತಾ ಬ್ಯಾನರ್ಜಿ ಕಿಡಿ
ಕಿತ್ತು ತಿನ್ನುವ ಬಡತನ, ಉದ್ಯೋಗವೂ ಇಲ್ಲ | ನೊಂದ ಅಣ್ಣ ತಮ್ಮ ಆತ್ಮಹತ್ಯೆಗೆ ಶರಣು
ಅಕ್ಷರಸ್ಥರೇ ಇವತ್ತು ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ಮೋಸ ಮಾಡುತ್ತಿದ್ದಾರೆ | ಡಾ.ಎಚ್.ಟಿ. ಪೋತೆ
ಆಟಿಕೆ ಗನ್ ತೋರಿಸಿ ಕಾರನ್ನೇ ಅಪಹರಿಸಿದ್ದ ಐವರು ಅರೆಸ್ಟ್!
ಗೋ ಕಳ್ಳತನಕ್ಕೆ ಜಾತಿ ಇಲ್ಲ, ಧರ್ಮ ಇಲ್ಲ, ಬಿಜೆಪಿಯವರೇ ಬೀಫ್ ಎಕ್ಸ್ ಪೋರ್ಟ್ ಮಾಡ್ತಿದ್ದಾರೆ | ಮಿಥುನ್ ರೈ
ಸೆ.27ರಂದು ಭಾರತ ಬಂದ್: ಈ ಬಾರಿ ಬಂದ್ ತೀವ್ರ ರೀತಿಯಲ್ಲಿ ನಡೆಯಲಿದೆ | ಕೋಡಿಹಳ್ಳಿ ಚಂದ್ರಶೇಖರ್
ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ ಗಂಭೀರ ಸಮಸ್ಯೆ ಉಂಟಾಗಬಹುದು | ಇದಕ್ಕೆ ಪರಿಹಾರವೇನು?