ದೇಶಾದ್ಯಂತ ಬುಗಿಲೆದ್ದ ರೈತರ ಆಕ್ರೋಶ: ವಿವಿಧ ಹೆದ್ದಾರಿ ತಡೆದು ತೀವ್ರ ಪ್ರತಿಭಟನೆ - Mahanayaka

ದೇಶಾದ್ಯಂತ ಬುಗಿಲೆದ್ದ ರೈತರ ಆಕ್ರೋಶ: ವಿವಿಧ ಹೆದ್ದಾರಿ ತಡೆದು ತೀವ್ರ ಪ್ರತಿಭಟನೆ

bharath bandh
27/09/2021

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನುವಿರೋಧಿಸಿ ರೈತರು ಇಂದು ಭಾರತ್ ಬಂದ್ ನಡೆಸುತ್ತಿದ್ದು, ರೈತರ ಹೋರಾಟ ತೀವ್ರಗೊಂಡಿದ್ದು, ಘಾಜಿಪುರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ-ದೆಹಲಿ ಮಾರ್ಗದಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ ಎಂದು ತಿಳಿದು ಬಂದಿದೆ.

ಪ್ರತಿಭಟನೆಯಲ್ಲಿ 500 ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಿದ್ದು, ಈ ಪೈಕಿ 15 ಕಾರ್ಮಿಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿವೆ. ಇಂದು ಬೆಳಗ್ಗೆ 11 ಗಂಟೆಗೆ ರೈತ-ಕಾರ್ಮಿಕ ಸಂಘಟನೆಗಳು ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ಆಯೋಜಿಸಿವೆ.

ಚಂಡೀಗಢದಲ್ಲಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ದೆಹಲಿ ಸಂಪರ್ಕಿಸುವ ಹರಿಯಾಣ- ಪಂಜಾಬ್ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದಿದ್ದಾರೆ. ಹೆದ್ದಾರಿಗಳಲ್ಲಿ ನೂರಾರು ರೈತರು ಜಮಾವಣೆಗೊಂಡಿದ್ದರಿಂದ ಸಂಚಾರ ದಟ್ಟಣೆ ಎದುರಾಗಿದೆ. ಅಲ್ಲದೇ, ಹೆದ್ದಾರಿಗಳಲ್ಲಿ ಟ್ರ್ಯಾಕ್ಟರ್ ನಿಲ್ಲಿಸಿ, ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಭಾರತ್ ಬಂದ್ ಹಿನ್ನೆಲೆ, ರಾಜ್ಯದಲ್ಲಿ ಸಂಚಾರ ದಟ್ಟಣೆಗಳಾಗುವ ಸಾಧ್ಯತೆಯಿದೆ. ಹರ್ಯಾಣದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಹಿಂಸಾಚಾರ ತಡೆಗಟ್ಟುವುದು ಮತ್ತು ಸಂಚಾರ ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳ ಕಾರ್ಯನಿರ್ವಹಣೆ ಸುಲಭಗೊಳಿಸುವುದು ಈ ವ್ಯವಸ್ಥೆಗಳ ಪ್ರಾಥಮಿಕ ಉದ್ದೇಶ ಎಂದು ಅವರು ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ರೈತರು ಶಾಂತಿಯುತವಾಗಿ ಪ್ರತಿಭಟಿಸಬೇಕು ಎಂದು ಅವರು ಮನವಿ ಮಾಡಿದರು. ಬಂದ್ ಕರೆಯ ನೆಪದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಸರ್ಕಾರಿ ಆಸ್ಪತ್ರೆಯ ಲಿಫ್ಟ್ ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ | ವಾರ್ಡ್ ಬಾಯ್ ಅರೆಸ್ಟ್

ರಾಜ್ಯ ಸರ್ಕಾರಕ್ಕೆ ನಾಚಿಕೆಗೇಡು: ದೇವಸ್ಥಾನ ಪ್ರವೇಶಿಸಿದ ದಲಿತ ವ್ಯಕ್ತಿಗೆ ದಂಡ | ಮತ್ತೊಂದು ಅಸ್ಪೃಶ್ಯತಾ ಆಚರಣೆ ಪ್ರಕರಣ

ಗೋಡೆ ಮೈಮೇಲೆ ಕುಸಿದು ಬಿದ್ದರೂ ತನ್ನ ಮಗುವಿನ ಮೈಗೆ ಸಣ್ಣ ಗೆರೆಯೂ ಬೀಳದಂತೆ ಕಾಪಾಡಿದ ತಾಯಿ | ವೈರಲ್ ವಿಡಿಯೋ

ಭಾರತ ಬಂದ್: ಬೆಂಗಳೂರಿನಲ್ಲಿ ಹೈಅಲಾರ್ಟ್ | ಬಂದ್ ತೀವ್ರ ಸ್ವರೂಪದಲ್ಲಿರುವ ಸಾಧ್ಯತೆ!

ಸಿಎಂ ಬೊಮ್ಮಾಯಿ ಬೆಂಗಾವಲು ವಾಹನ ಕಂಡು ಗಾಬರಿಯಿಂದ ಸ್ಕೂಟಿಯಿಂದ ಬಿದ್ದ ಮಹಿಳೆ!

ನಿದ್ದೆಯಿಂದ ಎಚ್ಚರವಾದ ವೇಳೆ ಆತ ಅತ್ಯಾಚಾರ ನಡೆಸ್ತಿದ್ದ | ಅತ್ಯಾಚಾರಕ್ಕೂ ಮುನ್ನ ಸಂತ್ರಸ್ತೆಯ ವಿಶ್ವಾಸಗಳಿಸಿದ್ದ ಕ್ಯಾಬ್ ಡ್ರೈವರ್!

ಇತ್ತೀಚಿನ ಸುದ್ದಿ