ನಾಳೆ ನಡೆಯಲಿರುವ ಭಾರತ ಬಂದ್ ಗೆ ಕಾಂಗ್ರೆಸ್, ಜೆಡಿಎಸ್ ಬೆಂಬಲ
ಬೆಂಗಳೂರು: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆ ವಿರುದ್ಧ ಸೆ.27(ನಾಳೆ) ರೈತರ ಸಂಘಟನೆಗಳು ಭಾರತ್ ಬಂದ್ ನಡೆಸಲು ಕರೆ ನೀಡಿದ್ದು, ನಾಳಿನ ಬಂದ್ ಗೆ ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲ ಘೋಷಿಸಿದೆ.
ರೈತರು ನಡೆಸುತ್ತಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಬೆಂಬಲ ಸೂಚಿಸುತ್ತದೆ. ಕೇಂದ್ರ ಸರ್ಕಾರ ಜಾರಿ ಮಾಡಿರುವ ಮೂರು ಕೃಷಿ ಕಾಯ್ದೆ ವಿರುದ್ಧ ಅನ್ನದಾತರು ಬೀದಿಗಿಳಿದು ಹೋರಾಡುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ನಮಗೆ ಬದುಕಲು ಬಿಡಿ ಎಂದು ಕಣ್ಣೀರಿಡುತ್ತಾ ರೈತರು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಆದರೂ ಪ್ರಧಾನಿ ಮೋದಿ ಈವರೆಗೂ ರೈತರನ್ನು ಭೇಟಿಯಾಗಿ ಚರ್ಚೆ ನಡೆಸಿಲ್ಲ. ಕೇಂದ್ರ ಸರ್ಕಾರ ರೈತರನ್ನು ಕೊಲೆ ಮಾಡುತ್ತಿದೆ. ನಾಳೆ ನಡೆಸುತ್ತಿರುವ ಭಾರತ್ ಬಂದ್ ಗೆ ನಮ್ಮ ಬೆಂಬಲವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇನ್ನೂ ಜೆಡಿಎಸ್ ಕೂಡ ನಾಳಿನ ಭಾರತ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದು, ರೈತರ ಹಿತದೃಷ್ಟಿಯಿಂದ ನಡೆಸುವ ಯಾವುದೇ ಹೋರಾಟಕ್ಕೂ ನಮ್ಮ ಬೆಂಬಲವಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದ್ದಾರೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಪುರುಷರ ಒಳ ಉಡುಪು ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ: ಸೃಷ್ಟಿಯಾಯ್ತು ಹೊಸ ವಿವಾದ
ಸಿಎಂ ಬೊಮ್ಮಾಯಿಯನ್ನು ಡ್ರೈವಿಂಗ್ ಮಾಡೋದು ಯಡಿಯೂರಪ್ಪ | ಸಿದ್ದರಾಮಯ್ಯ
ದಲಿತ ಮಕ್ಕಳ ಊಟದ ತಟ್ಟೆಯನ್ನು ಇತರ ಮಕ್ಕಳು ಮುಟ್ಟುತ್ತಿಲ್ಲ | ದೇವರಂತ ಮಕ್ಕಳ ಮೇಲೆಯೂ ಅಸ್ಪೃಶ್ಯತೆಯ ಕರಿನೆರಳು
ಪ್ರೇಯಸಿಯ ಕೈಕಾಲು ಕಟ್ಟಿ ಸೂಟ್ ಕೇಸ್ ನಲ್ಲಿ ತುಂಬಿಸಿ ಕಾಡಿಗೆಸೆದ ಪ್ರಿಯಕರ!
‘ತಾಲಿಬಾನಿ ಬಿಜೆಪಿ’ ಭಾರತವನ್ನು ಆಳಲು ಸಾಧ್ಯವಿಲ್ಲ | ಮಮತಾ ಬ್ಯಾನರ್ಜಿ ಕಿಡಿ
“ಮುಂದಿನ ದಿನಗಳಲ್ಲಿ ವಿಧಾನಸಭೆಯ ಸಭಾಂಗಣವನ್ನು ಮದುವೆ, ಮುಂಜಿಗೂ ಬಾಡಿಗೆಗೆ ಕೊಡಬಹುದು”