ಬಿಜೆಪಿ ಹಾಗೂ ಆರೆಸ್ಸೆಸ್ ಸಿದ್ಧಾಂತದ ವಿರುದ್ಧ ಸಂವಿಧಾನ ರಕ್ಷಣೆಗೆ ಭಾರತ್ ಜೋಡೋ: ರಾಹುಲ್ ಗಾಂಧಿ

rahulgandhi
30/09/2022

ಚಾಮರಾಜನಗರ: ಬಿಜೆಪಿ ಹಾಗೂ ಆರೆಸ್ಸೆಸ್ ಸಿದ್ಧಾಂತದ ವಿರುದ್ಧ ಸಂವಿಧಾನ ರಕ್ಷಣೆ ಮಾಡಲು ಭಾರತ್ ಜೋಡೋ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಭಾರತ್ ಜೋಡೋ ಸಮಾವೇಶದಲ್ಲಿ ಮಾತನಾಡಿದ ಅವರು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಈ ಯಾತ್ರೆ ನಡೆಯುತ್ತೆ. ಬಿಸಿಲು, ಮಳೆ ಲೆಕ್ಕಿಸದೇ ಪಾದಯಾತ್ರೆಯನ್ನ ಮಾಡುತ್ತಿದ್ದೇವೆ. ಈ ಪಾದಯಾತ್ರೆಯಲ್ಲಿ ದ್ವೇಷ, ಹಿಂಸೆ ಎಲ್ಲೂ ಕಾಣುವುದಿಲ್ಲ. ಎಲ್ಲ ಧರ್ಮ, ಜಾತಿಯವರೂ ಭಾಗಿಯಾಗಿದ್ದಾರೆ ಎಂದು ಹೇಳಿದರು.

ಭಾರತ್ ಜೋಡೋ ಯಾತ್ರೆಯನ್ನು ಯಾರಿಂದಲೂ, ಯಾವ ಶಕ್ತಿಯಿಂದ ನಿಲ್ಲಿಸಲು ಆಗುವುದಿಲ್ಲ. ಭಾರತ್ ಜೋಡೋ ಉದ್ದೇಶ ಭಾಷಣ ಮಾಡುವುದು ಅಲ್ಲ. ಕರ್ನಾಟಕದಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ ನಿರುದ್ಯೋಗ ಸಮಸ್ಯೆ ಇದೆ.  ಬಿಜೆಪಿಯವರು ವಿಪಕ್ಷಗಳ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಪಾದಯಾತ್ರೆಯೊಂದೇ ನಮಗೆ ಮಾರ್ಗವಾಗಿದ್ದು, ಆ ಮಾರ್ಗದಲ್ಲಿ ಸಾಗುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದರು.

ಇಂದು ಮುಂಜಾನೆ ತಮಿಳುನಾಡಿನ ಗುಡಲೂರಿನಿಂದ ಕರ್ನಾಟಕದ ಗುಂಡ್ಲುಪೇಟೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ವಾಹನದಲ್ಲಿ ಬಂದರು. ಸಮಾವೇಶದಲ್ಲಿ ಭಾರೀ ಜನಸ್ತೋಮ ನೆರೆದಿತ್ತು.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version