ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ಭಾರತ್ ಜೋಡೋ ಯಾತ್ರೆಯಲ್ಲಿ ಸಿದ್ದರಾಮಯ್ಯ
ಚಾಮರಾಜನಗರ: ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಇನ್ನು 6 ತಿಂಗಳಲ್ಲಿ ಸರ್ಕಾರ ಬದಲಾಗಲಿದೆ. ತಾರತಮ್ಯ ಮಾಡುತ್ತಿರುವ ಪೊಲೀಸರಿಗೆ ಆಗ ಬುದ್ಧಿ ಕಲಿಸುತ್ತೇವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಸಿದರು.
ಗುಂಡ್ಲುಪೇಟೆಯಲ್ಲಿ ನಡೆದ ಭಾರತ್ ಜೋಡೋ ಸಮಾವೇಶದಲ್ಲಿ ಮಾತನಾಡಿದ ಅವರು, ಬೇರೆ ಯಾವುದೇ ನಾಯಕರು ಈ ರೀತಿಯ ಪಾದಯಾತ್ರೆ ಮಾಡಿಲ್ಲ. ಈ ಪಾದಯಾತ್ರೆ ಯಶಸ್ವಿಯಾಗಲಿದೆ ಎಂದರು.
ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ ದ್ವೇಷದ ರಾಜಕಾರಣ ಹೆಚ್ಚಾಗಿದೆ. ಜನರು ಈಗ ಆತಂಕದ ಪರಿಸ್ಥಿತಿಯಲ್ಲಿ ಬದುಕುವ ವಾತಾವರಣ ನಿರ್ಮಾಣವಾಗಿದೆ. ಅಂಬೇಡ್ಕರ್ ರೂಪಿಸಿರುವ ಸಂವಿಧಾನ ಬೇಡ ಎಂದು ಇವರು ಹಲವು ಬಾರಿ ಹೇಳಿದ್ದಾರೆ. ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ಇವರಿಗೆ ನಂಬಿಕೆ ಇಲ್ಲ. ಬಿಜೆಪಿಯವರಿಗೆ ದೇಶದಲ್ಲಿ ಶಾಂತಿ, ಸಾಮರಸ್ಯ ಇರಬಾರದು. ಜನರನ್ನ ಇಬ್ಭಾಗ ಮಾಡುವುದೇ ಇವರ ಉದ್ದೇಶ ಎಂದು ಆರೋಪಿಸಿದರು.
ದೇಶದಲ್ಲಿ ಈಗ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡುವುದು ಅನಿವಾರ್ಯವಾಗಿದೆ. ಸಂವಿಧಾನ ಉಳಿಸಲು ನಾವು ಎಲ್ಲ ರೀತಿಯ ತ್ಯಾಗಕ್ಕೂ ಸಿದ್ಧರಾಗಬೇಕು ಎಂದು ಕರೆ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka