ಸೀತೆಯ ನೇಪಾಳ, ರಾವಣನ ಲಂಕೆಗಿಂತ ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ಏರುತ್ತಿದೆ | ಸುಬ್ರಮಣಿಯನ್ ಸ್ವಾಮಿ

02/02/2021

ನವದೆಹಲಿ: ಪೆಟ್ರೋಲ್ ದರ ಏರಿಕೆ ವಿರುದ್ಧ ಕೇಂದ್ರ ಸರ್ಕಾರವನ್ನು ಆಡಳಿತ ಪಕ್ಷದವರೇ ಆಗಿರುವ ಬಿಜೆಪಿಯ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ.

ಸೀತೆಯ ನೇಪಾಳ ಮತ್ತು ರಾವಣನ ಲಂಕೆಗಿಂತ ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ಏರುತ್ತಿದೆ ಎಂದು ಅವರು ಟೀಕಿಸಿದ್ದಾರೆ. ನಿನ್ನೆ ಮಂಡನೆಯಾದ ಬಜೆಟ್ ನಲ್ಲಿ ಪೆಟ್ರೋಲ್ ಬೆಲೆ 2.5 ರೂ. ಹಾಗೂ ಡೀಸೆಲ್ ಬೆಲೆ 4 ರೂಪಾಯಿ ಕೃಷಿ ಮೂಲ ಸೌಕರ್ಯ ಸೆಸ್ ಹೆಚ್ಚಳ ಘೋಷಿಸಿದ್ದರು. ಇದರ ಬೆನ್ನಲ್ಲೇ ಸುಬ್ರಮಣಿಯನ್​ ಸ್ವಾಮಿ ಈ ಹೇಳಿಕೆ ನೀಡಿದ್ದಾರೆ.

ಇಂದು ತಮ್ಮ ಟ್ವಿಟರ್​ನಲ್ಲಿ ಸುಬ್ರಮಣಿಯನ್​ ಸ್ವಾಮಿ ಫೋಟೋವೊಂದನ್ನು ಶೇರ್​ ಮಾಡಿಕೊಂಡಿದ್ದು, ಅದರಲ್ಲಿ ರಾಮನ ಭಾರತದಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 93 ರೂ. ಇದೆ. ಸೀತೆಯ ನೇಪಾಳದಲ್ಲಿ 53 ಮತ್ತು ರಾವಣನ ಲಂಕಾದಲ್ಲಿ 51 ರೂಪಾಯಿ ಇದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

Exit mobile version